ಗುರುವಾರ , ಮೇ 13, 2021
34 °C

`ಮಾನವ ಅಭಿವೃದ್ಧಿ ವರದಿ ತಯಾರಿಸಿ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ಎಲ್ಲ ಅಧಿಕಾರಿಗಳು ಮಾನವ ಅಭಿವೃದ್ಧಿ ವರದಿ ತಯಾರಿಸುವ ಮುನ್ನ ಜನಪ್ರತಿನಿಧಿಗಳಿಂದ ಸೂಕ್ತ ಸಲಹೆ ಪಡೆಯಬೇಕು ಎಂದ ಜಿಲ್ಲಾ ಪಂಚಾಯಿತಿ ಮುಖ್ಯ  ಯೋಜನಾಧಿಕಾರಿ ಚಂದ್ರಶೇಖರ ಗುಡಿ ಸೂಚಿಸಿದರು.ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಗುರುವಾರ ಜಿಲ್ಲಾ ಪಂಚಾಯತಿ ನಜೀರ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಾನವ ಅಭಿವೃದ್ಧಿ ವರದಿ ತಯಾರಿಕೆ ಕುರಿತ ತಾಲ್ಲೂಕು ಮಟ್ಟದ ಕಾರ್ಯಾಗಾರದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.ಮಾನವ ಅಭಿವೃದ್ಧಿಯು ಜನರ ಕಲ್ಯಾಣದ ಜತೆಗೆ ಜನರಿಗಿರುವ ಆಯ್ಕೆಗಳನ್ನು ವಿಸ್ತರಿಸುವ ಮಹತ್ತರ ಪ್ರಕ್ರಿಯೆಯಾಗಿದೆ. ಜಿಲ್ಲೆಯಲ್ಲಿ ಅನುಷ್ಠಾನ ಆಗುತ್ತಿರುವ ಯೋಜನೆಗಳು ಮಾನವ ಅಭಿವೃದ್ಧಿಗೆ ಹೇಗೆ ಪೂರಕ ಎಂಬುದರ ಅಧ್ಯಯನವೇ ಈ ವರದಿ ತಯಾರಿಕೆಯ ಉದ್ದೇಶ ಎಂದು ಅವರು ಹೇಳಿದರು.ಆರೋಗ್ಯ, ಶಿಕ್ಷಣ, ತಲಾ ಆದಾಯವನ್ನು ಆಧರಿಸಿ ಮಾನವ ಅಭಿವೃದ್ಧಿ ವರದಿ ತಯಾರಿಸಲಾಗುತ್ತದೆ. ಎಲ್ಲ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಕಾರ್ಯಾಗಾರ ನಡೆಸಿ ವರದಿ ತಯಾರಿಸುವ ಕುರಿತು ತರಬೇತಿ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.ತಾ.ಪಂ. ಅಧ್ಯಕ್ಷ ವಿ. ಗಾದಿಲಿಂಗಪ್ಪ ಕಾರ್ಯಾಗಾರ ಉದ್ಘಾಟಿಸಿದರು. ಉಪಾಧ್ಯಕ್ಷೆ  ಮರೆಮ್ಮ, ಸಿರುಗುಪ್ಪ ತಾ.ಪಂ. ಅಧ್ಯಕ್ಷೆ ಅಂಕಮ್ಮ, ಕಾರ್ಯ ನಿರ್ವಾಹಕಾಧಿಕಾರಿ ಜಾನಕೀರಾಮ, ರಾಧಾಕೃಷ್ಣ ರೆಡ್ಡಿ, ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.ಕರ್ನಾಟಕ ವಿವಿಯ ಸಹಾಯಕ ಪ್ರಾಧ್ಯಾಪಕ ಬಿ.ಎಚ್. ನಾಗೂರ್ ಉಪನ್ಯಾಸ ನೀಡಿದರು. ಖಾದರ್ ಸ್ವಾಗತಿಸಿದರು.  ಗೋಪಾಲಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.