ಶನಿವಾರ, ಮೇ 15, 2021
22 °C

ಮಾನವ ಸಂಪನ್ಮೂಲ ಸದ್ಬಳಕೆಗೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ನಮ್ಮ ಜನಸಂಖ್ಯೆಯನ್ನು ಗುಣಾತ್ಮಕ ಮಾನವ ಸಂಪತ್ತನ್ನಾಗಿ ಪರಿವರ್ತಿಸಿ, ಅದರ ಸದ್ಬಳಕೆ ಮಾಡಿ ದಾಗ ಮಾತ್ರ ಉತ್ತಮ ರಾಷ್ಟ್ರ ನಿರ್ಮಾಣ ಸಾಧ್ಯ~ ಎಂದು ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ನುಡಿದರು.ನಗರದ ಸರ್ಕಾರಿ ಕಲಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ವಿಭಾಗದಲ್ಲಿ ಆಯೋಜಿಸಿದ್ದ ಸಮಗ್ರ ಗುಣಮಟ್ಟ ನಿರ್ವಹಣೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕಾಲೇಜಿನ ಪ್ರಾಂಶುಪಾಲ ಪ್ರೊ. ಎಚ್.ವಿ. ಲಕ್ಷ್ಮೀ ನಾರಾಯಣ ಮಾತನಾಡಿ, `ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಹೊರತೆಗೆದು ಅವರ ಸಾಮರ್ಥ್ಯದ ಬಗ್ಗೆ ಅವರಲ್ಲೇ ತಿಳಿವ ಳಿಕೆ ಮೂಡಿಸಿ ಮಾನವ ಸಂಪನ್ಮೂಲದ ಸಮರ್ಥ ಬಳಕೆಗೆ ಇಂಥ ತರಬೇತಿಗಳು ಸಹಾಯಕವಾಗುತ್ತವೆ~ ಎಂದರು.`ಜಾಗತಿಕ ಮಾರುಕಟ್ಟೆಯಲ್ಲಿ ದೇಶವನ್ನು ಸಮರ್ಥವಾಗಿ ಮುನ್ನಡೆಸಬೇಕಾದರೆ ಗುಣಮಟ್ಟದ ಮಾನವ ಸಂಪನ್ಮೂಲ ಅಗತ್ಯ. ಈ ನಿಟ್ಟಿನಲ್ಲಿ ಸಮಗ್ರ ಗುಣಮಟ್ಟ ನಿರ್ವಹಣೆಯಂಥ ಕಾರ್ಯಕ್ರಮಗಳು ಅನುಕೂಲಕರ~ ಎಂದು ಸ್ನಾತಕೋತ್ತರ ವಿಭಾಗದ ಸಂಯೋಜಕ  ಪ್ರೊ. ಡಿ.ಜಿ. ಕೃಷ್ಣೇಗೌಡ ನುಡಿದರು.ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಸುನೀತಾ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ ಲಲಿತಾದೇವಿ ಮುಂತಾದವರು ವೇದಿಕೆಯಲ್ಲಿದ್ದರು. ಮಾನಸಾ ಸ್ವಾಗತಿಸಿದರು. ಪುಷ್ಪಾಂಜಲಿ ನಿರೂಪಿಸಿದರು. ತೇಜಸ್ ಕುಮಾರ್  ವಂದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.