ಬುಧವಾರ, ಏಪ್ರಿಲ್ 21, 2021
33 °C

ಮಾನವ ಹಕ್ಕು ಆಯೋಗಕ್ಕೆ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸರ್ಕಾರದ ಸೂಚನೆಯಂತೆ ಮೂಲ ಸೌಕರ್ಯ ಕಲ್ಪಿಸುವಲ್ಲಿ ವಿಫಲವಾದ ನಗರಸಭೆ ಪೌರಾಯುಕ್ತ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹಾಗೂ ಅಧ್ಯಕ್ಷರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ನಾಗರಿಕ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ನಗರ ಸಂಚಾಲಕ ರಾಜು ಪಟ್ಟಿ ಅವರು ಹೇಳಿದರು.ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಬಳಕೆ ಮಾಡುವ ಶೇ 22.75ರ ಅನುದಾನ `75 ಲಕ್ಷ~ ದುರ್ಬಕೆ ಮಾಡುವುದರ ಮೂಲಕ ಸರ್ಕಾರದ ಮಾರ್ಗ ಸೂಚಿಯನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗುತ್ತಿದೆಎಂದು ಆಪಾದಿಸಿದರು.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ವಾಸಿಸುವ ಪ್ರದೇಶಕ್ಕೆ ಶೇ 22.75ರ ಅನುದಾನವನ್ನು ಮೂಲಭೂತ ಸೌಲಭ್ಯಗಳಿಗಾಗಿ ಬಳಕೆ ಮಾಡಬೇಕು. ಆದರೆ, ಪರಿಶಿಷ್ಟ ಜನಾಂಗದವರು ವಾಸಿಸದೇ ಇರುವ ಪ್ರದೇಶದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಪಿಸಿದರು.ನಗರಸಭೆಯ ವಾರ್ಡ್ 18ರಲ್ಲಿ 10 ಲಕ್ಷ ಅನುದಾನದಲ್ಲಿ ಅಂಬೇಡ್ಕರ್ ಸಮುದಾಯ ಭವನ, ತಿಮ್ಮಾಪುರಪೇಟೆ ಬಡಾವಣೆಯ ಗಂಗಾಮತಸ್ಥರ ದತ್ತಾತ್ರೇಯ ದೇವಸ್ಥಾನಕ್ಕೆ ಸಂಬಂಧಿಸಿದ ಕಂಪೌಂಡ ಗೋಡೆ ನಿರ್ಮಾಣ ಹಾಗೂ 6ಲಕ್ಷದ ವೆಚ್ಚದಲ್ಲಿ ಶೌಚಾಲಯ ನಿರ್ಮಾಣ ಕಾಮಗಾರಿ ನಡೆಸಲಾಗುತ್ತಿದೆ. ಕೂಡಲೇ ಈ ಕಾಮಗಾರಿಗಳ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.