`ಮಾನವ ಹಕ್ಕು ಉಲ್ಲಂಘನೆ ಶಿಕ್ಷಾರ್ಹ'

7

`ಮಾನವ ಹಕ್ಕು ಉಲ್ಲಂಘನೆ ಶಿಕ್ಷಾರ್ಹ'

Published:
Updated:

ಕೋಲಾರ: ಮಾನವ ಹಕ್ಕುಗಳ ಉಲ್ಲಂಘನೆ ಶಿಕ್ಷಾರ್ಹ ಅಪರಾಧ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಎ.ವಿಜಯನ್ ಅಭಿಪ್ರಾಯ ಪಟ್ಟರು.ತಾಲ್ಲೂಕಿನ ಮಂಗಸಂದ್ರದ ಬೆಂಗಳೂರು ವಿ.ವಿ. ಸ್ನಾತಕೋತ್ತರ ಕೇಂದ್ರ, ಕಾನೂನು ಸೇವೆ ಪ್ರಾಧಿಕಾರ, ವಕೀಲರ ಸಂಘ, ಜಾಗೃತಿ ಸೇವಾ ಸಂಸ್ಥೆ, ಮುಕ್ತ ಮಹಿಳಾ ವೇದಿಕೆ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.ಮಾನವ ಹಕ್ಕುಗಳ ಉಲ್ಲಂಘನೆಯನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸುತ್ತದೆ. ದೇಶವನ್ನು ಕಾಡುತ್ತಿರುವ ಅಪೌಷ್ಟಿಕತೆ ಸಮಸ್ಯೆ ಮಾನವ ಹಕ್ಕುಗಳ ಉಲ್ಲಂಘನೆ ವ್ಯಾಪ್ತಿಗೆ ಬರುತ್ತದೆ ಎಂದರು.ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಆರ್.ನಟೇಶ್, ವಕೀಲರ ಸಂಘದ ಮಾಜಿ ಅಧ್ಯಕ್ಷ ಕೆ.ಆರ್.ಧನರಾಜ್, ವಕೀಲರಾದ ಕೆ.ವಿ.ಸುರೇಂದ್ರಕುಮಾರ್, ಜಿ.ಎನ್.ಜಯರಾಮ್ ಮಾತನಾಡಿದರು. ಪ್ರಾಧ್ಯಾಪಕ ಡಾಮಿನಿಕ್ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಗುಂಡಪ್ಪ  ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry