ಮಾನಸಿಕ ಆರೋಗ್ಯದತ್ತ ಕಾಳಜಿ ಅವಶ್ಯಕ: ನ್ಯಾ. ರಾಜಾ ಸೋಮಶೇಖರ್

7

ಮಾನಸಿಕ ಆರೋಗ್ಯದತ್ತ ಕಾಳಜಿ ಅವಶ್ಯಕ: ನ್ಯಾ. ರಾಜಾ ಸೋಮಶೇಖರ್

Published:
Updated:

ಬೀದರ್:  ಮಾನಸಿಕ ಆರೋಗ್ಯದತ್ತ ಕಾಳಜಿ ವಹಿಸುವುದು ಅವಶ್ಯಕ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಸಿ.ಆರ್. ರಾಜಾ ಸೋಮಶೇಖರ್ ನುಡಿದರು.ನಗರದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ವೈದ್ಯರ ಸಲಹೆಯೊಂದಿಗೆ ಪರಿಹರಿಸಿಕೊಳ್ಳಬೇಕು. ಮಾನಸಿಕ ಸಮತೋಲನ ಕಾಯ್ದುಕೊಳ್ಳಲು ಒತ್ತು ಕೊಡಬೇಕು ಎಂದು ಹೇಳಿದರು.ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವವರನ್ನು ಇತರರಂತೆ ಗೌರವದಿಂದ ಕಾಣಬೇಕು. ಪಾಲಕರು ಕೂಡ ಅವರತ್ತ ಹೆಚ್ಚಿನ ನಿಗಾ ವಹಿಸಬೇಕು ಎಂದು ಹೇಳಿದರು.ಮಾನಸಿಕ ಸ್ವಾಸ್ಥ್ಯದ ಪಾತ್ರ ದೈಹಿಕ ಆರೋಗ್ಯದಷ್ಟೇ ಮಹತ್ವದ್ದಾಗಿದೆ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಮಚಂದ್ರರಾವ್ ಗಂದಗೆ ಅಭಿಪ್ರಾಯಪಟ್ಟರು.ವ್ಯಕ್ತಿ ದೈಹಿಕ ಮತ್ತು ಮಾನಸಿಕವಾಗಿ ಸಶಕ್ತವಾಗಿದ್ದರೆ ಮಾತ್ರ ಜೀವನದಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯ ಎಂದು ಪ್ರತಿಪಾದಿಸಿದರು.ಮಾದಕ ವಸ್ತುಗಳ ಸೇವನೆಯೂ ಮಾನಸಿಕ ಅಸ್ವಸ್ಥತೆಗೆ ಕಾರಣವಾಗುತ್ತದೆ ಎಂದು ಉಪನ್ಯಾಸ ನೀಡಿದ ಪ್ರಾಧ್ಯಾಪಕ ಡಾ. ರಾಘವೇಂದ್ರ ಹೇಳಿದರು.ಸರ್ಕಾರಿ ವೈದ್ಯಕೀಯ ಕಾಲೇಜಿನ ಮಾನಸಿಕ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ. ಎಂ.ಕೆ. ದೇಶಪಾಂಡೆ, ಡಾ. ನಾಮದೇವ್ ಚವ್ಹಾಣ್ ಉಪನ್ಯಾಸ ನೀಡಿದರು.

 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಾಬುರಾವ್ ಬೆಲ್ಲದ್ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ದೇಶಕ ಡಾ. ಬಿ.ಒ. ಹನುಮಂತಪ್ಪ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೃಷ್ಣಾರೆಡ್ಡಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಕಾಶಿನಾಥ ಕಾಂಬಳೆ, ಆರೋಗ್ಯ ಶಿಕ್ಷಣಾಧಿಕಾರಿ ಸುಭಾಷ್ ಮುದಾಳೆ, ವಕೀಲರಾದ ಶಿವಶರಣಪ್ಪ ಪಾಟೀಲ್, ಬಿ.ಎಸ್. ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರ ವೈದ್ಯಕೀಯ ಕಾಲೇಜು ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry