ಸೋಮವಾರ, ಮೇ 10, 2021
26 °C

ಮಾನಸಿಕ ಸದೃಢತೆಗೆ ಚೆಸ್ ಆಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ: `ಚದುರಂಗದ ಆಟ ಬಹು ಚಾಣಾಕ್ಷತೆಯ ಕ್ರೀಡೆಯಾಗಿದೆ. ಯುವ ಕರು ಆಟದಲ್ಲಿ ಆಸಕ್ತಿಯಿಂದ ಭಾಗವ ಹಿಸಬೇಕು~ ಎಂದು ಮಾಜಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.ಸ್ಥಳೀಯ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಮಂಗಳವಾರ ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ ಕವಿವಿ ಏಕವಲಯ ಪುರುಷರ ಹಾಗೂ ಮಹಿಳೆಯರ ಚದುರಂಗ ಸ್ಪರ್ಧೆ ಹಾಗೂ ಕವಿವಿ ತಂಡದ ಆಯ್ಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಚದುರಂಗ ಆಟದಿಂದ ಬುದ್ಧಿಶಕ್ತಿ ಚುರುಕುಗೊಳ್ಳುತ್ತದೆ. ಮಾನಸಿಕವಾಗಿ ಸದೃಢರಾಗುತ್ತಾರೆ. ಮನಸ್ಸು ಹೆಚ್ಚು ಕ್ರಿಯಾಶೀಲವಾಗುತ್ತದೆ. ಆಟದಲ್ಲಿ ಸೋಲು- ಗೆಲುವು ಮುಖ್ಯವಲ್ಲ. ಭಾಗವಹಿಸುವುದು ಮುಖ್ಯ ಎಂದರು.ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಪದವಿ ಮಹಾವಿದ್ಯಾಲಯದ ಸ್ಥಾನಿಕ ಸಮಿತಿ ಅಧ್ಯಕ್ಷ ಆರ್.ಕೆ. ಹಬೀಬ ಅಧ್ಯಕ್ಷತೆ ವಹಿಸಿದ್ದರು. ಬಿ.ಎನ್. ದಾಯಮ್ಮನವರ, ವಿ.ವೈ. ಮೊರಬರಡ್ಡಿ, ವಾಸಣ್ಣ ಕುರಡಗಿ, ಕೆ.ಬಿ. ತಳಗೇರಿ ಮತ್ತಿತರರು ಹಾಜರಿದ್ದರು.ಕವಿವಿ ವ್ಯಾಪ್ತಿಯ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಪ್ರಾಚಾರ್ಯ ಉಮೇಶ ಬಾರಕೇರ ಸ್ವಾಗತಿಸಿದರು. ಶಶಿಕಾಂತ ಕೊರ್ಲಹಳ್ಳಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.