ಮಾನಸಿಕ ಸ್ವಾಸ್ಥ್ಯಕ್ಕೆ ಕ್ರೀಡೆಯೂ ಅಗತ್ಯ: ವಿಶ್ವನಾಥ್

7

ಮಾನಸಿಕ ಸ್ವಾಸ್ಥ್ಯಕ್ಕೆ ಕ್ರೀಡೆಯೂ ಅಗತ್ಯ: ವಿಶ್ವನಾಥ್

Published:
Updated:

ಮಡಿಕೇರಿ: ಪ್ರತಿಯೊಬ್ಬರೂ ಮನಸ್ಸನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಲು ಕ್ರೀಡೆ, ಸಾಹಿತ್ಯ ಹಾಗೂ ಕಲಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ ಎಂದು ಸಂಸದ ಎಚ್.ವಿಶ್ವನಾಥ್ ಮಂಗಳವಾರ ಇಲ್ಲಿ ಅಭಿಪ್ರಾಯಪಟ್ಟರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿರುವ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಸಾಂಸ್ಕೃತಿಕ ಹಾಗೂ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಗ್ರಾಮೀಣ ಕ್ರೀಡೆಗೆ ಹೆಚ್ಚಿನ ಅನುದಾನ ನೀಡಿ ಉತ್ತೇಜನ ನೀಡುತ್ತಿವೆ. ಕ್ರೀಡಾ ಕ್ಷೇತ್ರದಲ್ಲಿ ಹೆಸರು ಮಾಡಿರುವ ಕೊಡಗು ಜಿಲ್ಲೆ ಇನ್ನೂ ಹೆಚ್ಚಿನ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಬೇಕು ಎಂದು ಸಲಹೆ ಮಾಡಿದರು.ಜಿ.ಪಂ. ಅಧ್ಯಕ್ಷ ಶಾಂತೆಯಂಡ ರವಿಕುಶಾಲಪ್ಪ, ಜಿಲ್ಲಾಧಿಕಾರಿ ಕೆ.ಎಚ್. ಅಶ್ವತ್ಥನಾರಾಯಣಗೌಡ, ವಿಧಾನ ಪರಿಷತ್ ಸದಸ್ಯ ಟಿ. ಜಾನ್, ಜಿ.ಪಂ. ಮಾಜಿ ಸದಸ್ಯ ಮನುಮುತ್ತಪ್ಪ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ.ಬಿ. ಕುಂಞಪ್ಪ ಮಾತನಾಡಿದರು. ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್. ಕೃಷ್ಣಪ್ಪ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಗಾಯತ್ರಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಸಿ.ಎ. ಅಯ್ಯಣ್ಣ, ಎಚ್.ಡಿ. ಕೃಷ್ಣವೇಣಿ ಹಾಜರಿದ್ದರು.

ಇದಕ್ಕೂ ಮುನ್ನ ಕ್ರೀಡಾ ತರಬೇತುದಾರ ಸುರೇಶ್ ಬಿದ್ದಪ್ಪ ನಿಧನಕ್ಕೆ ಸಂತಾಪ ಸೂಚಿಸಲಾಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry