ಬೆಂಗಳೂರು: ರಾಜಧಾನಿಯ ವ್ಯಾಪ್ತಿಯಲ್ಲಿ 60 ಕಿ.ಮೀ. ಉದ್ದದಲ್ಲಿ ಮಾನೊ ರೈಲು, ಲಘು ರೈಲು ಸಂಪರ್ಕ ಕಲ್ಪಿಸುವ ಪ್ರಸ್ತಾವ ರಾಜ್ಯ ಸರ್ಕಾರದ ಮುಂದಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಜಿ.ಜನಾರ್ದನ ರೆಡ್ಡಿ ತಿಳಿಸಿದ್ದಾರೆ.

ವಿಧಾನ ಪರಿಷತ್ನ ಕಾಂಗ್ರೆಸ್ ಸದಸ್ಯ ಆರ್.ವಿ.ವೆಂಕಟೇಶ್ ಅವರ ಪ್ರಶ್ನೆಗೆ ಗುರುವಾರ ಲಿಖಿತ ಉತ್ತರ ನೀಡಿರುವ ಸಚಿವರು, ‘ನಾಲ್ಕು ಕಾರಿಡಾರ್ಗಳಲ್ಲಿ ಮಾನೊ ರೈಲು, ಲಘು ರೈಲು ಸಂಪರ್ಕ ಕಲ್ಪಿಸುವ ಪ್ರಸ್ತಾವವಿದೆ. ಕತ್ತರಿಗುಪ್ಪೆ ರಸ್ತೆ-ವರ್ತುಲ ರಸ್ತೆ ಜಂಕ್ಷನ್-ನ್ಯಾಷನಲ್ ಕಾಲೇಜು (5 ಕಿ.ಮೀ), ಹೊಸೂರು ರಸ್ತೆ-ಬನ್ನೇರುಘಟ್ಟ ರಸ್ತೆ ಜಂಕ್ಷನ್ (15) ಕಿ.ಮೀ ಕಾರಿಡಾರ್ಗಳನ್ನು ‘ನಮ್ಮ ಮೆಟ್ರೊ’ ಎರಡನೇ ಹಂತದಲ್ಲೇ ಕೈಗೆತ್ತಿಕೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.

ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರವು (ಬಿಎಂಆರ್ಡಿಎ) 2010ರ ಡಿಸೆಂಬರ್ನಲ್ಲಿ ನಡೆಸಿರುವ ಸಂಚಾರ ಮತ್ತು ಸಾಗಣೆ ಅಧ್ಯಯನ (ಸಿಟಿಟಿಎಸ್) ವರದಿಯಲ್ಲಿ ಒಂಬತ್ತು ಕಾರಿಡಾರ್ಗಳನ್ನು ಶಿಫಾರಸು ಮಾಡಲಾಗಿದೆ. ಈ ವರದಿಗೆ ಅನುಮೋದನೆ ದೊರೆತ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.