ಭಾನುವಾರ, ಮೇ 16, 2021
26 °C

ಮಾರಮ್ಮ ದೇಗುಲ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ನಾಯಕ ಜನಾಂಗದ ವತಿಯಿಂದ ನಿರ್ಮಿಸಲಾಗಿರುವ ಮಾರಮ್ಮ ದೇವಾಲಯವನ್ನು ಗುರುವಾರ ಲೋಕಾರ್ಪಣೆ ಮಾಡಲಾಯಿತು.ಏಟ್ರಿ ಸಂಸ್ಥೆ ಪಕ್ಕದಲ್ಲೇ ಇರುವ ಈ ದೇವಾಲಯವನ್ನು ಭಕ್ತರ ನೆರವಿನೊಂದಿಗೆ ನಿರ್ಮಿಸಲಾಗಿದೆ. ಬುಧವಾರ ಹಾಗೂ ಗುರುವಾರ ಹೋಮ-ಹವನಗಳನ್ನು ಮಾಡುವ ಮೂಲಕ ವಿಗ್ರಹ ಪ್ರತಿಷ್ಠಾಪನೆ ಮಾಡಲಾಯಿತು. ನಂತರ ವಿಶೇಷ ಅಲಂಕಾರ ಮಾಡಿ ಮಂತ್ರಪುಷ್ಪ, ಮಹಾನಿವೇದನೆ ಹಮ್ಮಿಕೊಳ್ಳಲಾಯಿತು.ದೇವಾಲಯ ಲೋಕಾರ್ಪಣೆ ಅಂಗವಾಗಿ ಆಗಮಿಸಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.