ಮಂಗಳವಾರ, ಮಾರ್ಚ್ 2, 2021
31 °C

ಮಾರುಕಟ್ಟೆ ಕಾಮಗಾರಿಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾರುಕಟ್ಟೆ ಕಾಮಗಾರಿಗೆ ಚಾಲನೆ

ಬೆಂಗಳೂರು: ಮಡಿವಾಳದಲ್ಲಿ ₹14 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಆಧುನಿಕ ಸೌಲಭ್ಯವುಳ್ಳ ಮಾರುಕಟ್ಟೆ ಕಾಮಗಾರಿಗೆ ಭಾನುವಾರ ಚಾಲನೆ ದೊರೆಯಿತು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಮೇಯರ್‌ ಬಿ.ಎನ್. ಮಂಜುನಾಥ್‌ ರೆಡ್ಡಿ ಶಂಕುಸ್ಥಾಪನೆ ನೆರವೇರಿಸಿದರು.

ಈ ವೇಳೆ ಮಾತನಾಡಿದ  ಬಿ.ಎನ್. ಮಂಜುನಾಥ್‌ ರೆಡ್ಡಿ, ‘ಮಹಾನಗರದ ನಾಗರಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಮಡಿವಾಳದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಿಸಲಾಗುತ್ತಿದೆ’ ಎಂದು ಹೇಳಿದರು.‘ಮಾರುಕಟ್ಟೆ ಪ್ರದೇಶದಲ್ಲಿ ಪ್ರತ್ಯೇಕ ವಾಹನ ನಿಲುಗಡೆ, ಶೌಚಾಲಯ, ಸ್ನಾನಗೃಹ ಮತ್ತು ವಿಶ್ರಾಂತಿ ಕೊಠಡಿಗಳು ಇರಲಿವೆ. ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ’ ಎಂದರು. ‘ಮಾರುಕಟ್ಟೆ ಮುಖ್ಯರಸ್ತೆಯನ್ನು ಈಗಾಗಲೇ ಕಾಂಕ್ರೀಟ್‌್ ರಸ್ತೆಯನ್ನಾಗಿ ಮಾಡಲಾಗಿದ್ದು, ಮಳೆ ನೀರು ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಇದೆ. ಪ್ರತಿದಿನವೂ ಕಸದ ವಿಲೇವಾರಿಗೆ ಪಾಲಿಕೆಯು ಕ್ರಮ ಕೈಗೊಳ್ಳಲಿದೆ’ ಎಂದು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.