ಭಾನುವಾರ, ಏಪ್ರಿಲ್ 18, 2021
31 °C

ಮಾರುತಿ: ಮುಂದಿನ ವಾರದಿಂದ ಮಾನೇಸರ್ ಘಟಕ ಪುನರಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಕಾರ್ಮಿಕ ಗಲಭೆ ಹಿನ್ನೆಲೆಯಲ್ಲಿ ಬೀಗಮುದ್ರೆಗೆ ಒಳಗಾಗಿದ್ದ ಮಾರುತಿ ಸುಜುಕಿ ಕಂಪೆನಿಯ ಮಾನೇಸರ್ ತಯಾರಿಕಾ ಘಟಕ ಮುಂದಿನ ಮಂಗಳವಾರದಿಂದ ಭಾಗಶಃ ಪುನರಾರಂಭವಾಗಲಿದೆ ಎಂದು ಕಂಪೆನಿ ಮೂಲಗಳು ತಿಳಿಸಿವೆ.ಸೋಮವಾರ ರಜೆ ಇರುವುದರಿಂದ ಮಂಗಳವಾರದಿಂದ ಘಟಕ ಪುನರಾರಂಭಿಸಲು ನಿರ್ಧರಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಎಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದೂ ಮೂಲಗಳು ಹೇಳಿವೆ.   ಜುಲೈ 18ರಂದು ನಡೆದ ಕಾರ್ಮಿಕ ಗಲಭೆಯಲ್ಲಿ ಕಂಪೆನಿಯ ಮಾನವ ಸಂಪನ್ಮೂಲ ವಿಭಾಗದ ಅಧಿಕಾರಿಯೊಬ್ಬರು ಹತ್ಯೆಯಾಗಿದ್ದರು. 100ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಜುಲೈ 21ರಿಂದ ಘಟಕ ಬೀಗ ಮುದ್ರೆಗೆ ಒಳಗಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ 114 ಆರೋಪಿಗಳನ್ನು ಬಂಧಿಸಲಾಗಿದೆ.ಭವಿಷ್ಯದಲ್ಲಿ ಇಂತಹ  ಘಟನೆಗಳು ಮರುಕಳಿಸದಂತೆ ಮಾಡಲು ಕಂಪೆನಿ ಜಿಲ್ಲಾಡಳಿತ ಜತೆ ಕೈಜೋಡಿಸಿ ಭದ್ರತೆಗೆ ಸಂಬಂಧಿಸಿದ ಕ್ರಮಗಳನ್ನು ಕೈಗೊಂಡಿದೆ  ಎಂದೂ ಮೂಲಗಳು ಸ್ಪಷ್ಟಪಡಿಸಿವೆ.ಆದರೆ, ಮಾನೇಸರ್ ಘಟಕ ಪುನರಾರಂಭಕ್ಕೆ ಸಂಬಂಧಿಸಿದಂತೆ ಕಂಪೆನಿ ಇದುವರೆಗೆ ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ.  ಗರುವಾರ ಈ ಕುರಿತು  ಅಧಿಕೃತ ಹೇಳಿಕೆ ನೀಡುವುದಾಗಿ ಕಂಪೆನಿ `ಸಿಇಒ~ ಸಿದ್ದಿಖಿ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.