ಗುರುವಾರ , ಏಪ್ರಿಲ್ 22, 2021
22 °C

ಮಾರ್ಚ್ 25ಕ್ಕೆ ಅಧಿವೇಶನ ಅಂತ್ಯ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಸಂಸತ್ತಿನ ಬಜೆಟ್ ಅಧಿವೇಶನ ನಿಗದಿಪಡಿಸಿದ್ದಕ್ಕಿಂತ ಒಂದು ತಿಂಗಳು ಮುನ್ನವೇ, ಅಂದರೆ ಮಾರ್ಚ್ 25ರಂದು ಮುಕ್ತಾಯವಾಗುವ ಸಾಧ್ಯತೆಗಳಿವೆ. ಶುಕ್ರವಾರ ನಡೆಯಲಿರುವ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರ ನೇತೃತ್ವದ ಸಂಸತ್ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಪಿಎ) ಸಭೆಯಲ್ಲಿ ಈ ಬಗ್ಗೆ ನಿರ್ಣಯ ಹೊರಬೀಳಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.ಚುನಾವಣೆ ಸಂಬಂಧಿತ ಕಾರ್ಯಗಳ ಮೇಲೆ ಹೆಚ್ಚಿನ ಗಮನ ಹರಿಸುವ ಸಲುವಾಗಿ ಡಿಎಂಕೆ, ಎಐಎಡಿಎಂಕೆ, ಎಡಪಕ್ಷಗಳು ಮತ್ತು ತೃಣಮೂಲ ಕಾಂಗ್ರೆಸ್ ಸೇರಿದಂತೆ ಹಲವಾರು ಪಕ್ಷಗಳು ಅಧಿವೇಶನದ ಅವಧಿ ಕಡಿತಗೊಳಿಸುವಂತೆ ಮನವಿ ಮಾಡಿರುವುದಾಗಿ ಸಚಿವರೊಬ್ಬರು ತಿಳಿಸಿದ್ದಾರೆ.ಈ ಹಿಂದೆ ನಿಗದಿ ಪಡಿಸಲಾಗಿದ್ದ ವೇಳಾಪಟ್ಟಿಯಂತೆ ಅಧಿವೇಶನದ ಮೊದಲ ಹಂತ ಮಾರ್ಚ್ 16ಕ್ಕೆ ಕೊನೆಗೊಳ್ಳಲಿದ್ದು, ಎರಡನೆಯ ಹಂತ ಏಪ್ರಿಲ್ ನಾಲ್ಕರಿಂದ 21ರವರೆಗೆ ನಡೆಯಬೇಕಿದೆ. ಸರ್ಕಾರದ ಮುಂದೆ ಎರಡು ಆಯ್ಕೆಗಳಿದ್ದು, ದೀರ್ಘಾವಧಿ ಮಳೆಗಾಲದ ಅಧಿವೇಶನ ಅಥವಾ ಚುನಾವಣೆ ಬಳಿಕ ಮೇ ಮತ್ತು ಜೂನ್‌ನಲ್ಲಿ ಎರಡನೇ ಹಂತದ ಬಜೆಟ್ ಅಧಿವೇಶನ ನಡೆಸುವ ಅವಕಾಶಗಳಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.