ನವದೆಹಲಿ (ಐಎಎನ್ಎಸ್): ಸಂಸತ್ಬಜೆಟ್ ಅಧಿವೇಶನ ಮಾರ್ಚ್ ಎರಡನೇ ವಾರ ಆರಂಭವಾಗಲಿದ್ದು, ಮೂರನೇ ವಾರ ಕೇಂದ್ರ ಬಜೆಟ್ ಮಂಡನೆಯಾಗಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಫೆಬ್ರುವರಿ ಕೊನೆಯ ವೇಳೆಗೆ ಬಜೆಟ್ ಮಂಡನೆಯಾಗಬಹುದು ಎಂದು ಈ ಹಿಂದೆ ನಿರೀಕ್ಷಿಸಲಾಗಿತ್ತು. ಆದರೆ ಐದು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅದನ್ನು ಮುಂದೂಡಲಾಗಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಮಾರ್ಚ್ 6ರಂದು ಚುನಾವಣಾ ಫಲಿತಾಂಶ ಹೊರಬೀಳಲಿದ್ದು, 9ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುತ್ತದೆ. ಚಳಿಗಾಲದ ಅಧಿವೇಶನದಲ್ಲಿ ರಾಜ್ಯಸಭೆಯಲ್ಲಿ ಅನುಮೋದನೆಗೊಳ್ಳದ ವಿವಾದಾತ್ಮಕ ಲೋಕಪಾಲ ಮಸೂದೆ ಕುರಿತು ಸರ್ಕಾರ ಬಜೆಟ್ ಅಧಿವೇಶನದಲ್ಲಿ ಚರ್ಚೆ ನಡೆಸಲಿದೆ ಎಂದು ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.