ಶನಿವಾರ, ಮೇ 15, 2021
29 °C

ಮಾರ್ನಿಂಗ್ ಮಿಸ್ಟ್ ದಾಳಿ: ಜಾಮೀನು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಂಗಳೂರಿನ ಹೊರವಲಯ ಪಡೀಲ್‌ನಲ್ಲಿರುವ ಮಾರ್ನಿಂಗ್ ಮಿಸ್ಟ್ ಹೋಂಸ್ಟೇ ಮೇಲಿನ ದಾಳಿ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಶುಕ್ರವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.ಆರೋಪಿಗಳಾದ ತಾರಾನಾಥ ಕುಮಾರ್, ರಾಜೇಶ್, ಶ್ರೇಯಸ್ ಮತ್ತು ಶೈಲೇಶ್ ಶೆಟ್ಟಿ ಜಾಮೀನು ಪಡೆದುಕೊಂಡವರು.ಇವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ, `ಆರೋಪಿಗಳು ತಲಾ 20 ಸಾವಿರ ರೂಪಾಯಿ ಬಾಂಡ್ ನೀಡಬೇಕು. ಸಾಕ್ಷ್ಯಗಳನ್ನು ನಾಶಪಡಿಸಲು ಯತ್ನಿಸಬಾರದು. ವಿಚಾರಣೆಗೆ ಸಹಕರಿಸಬೇಕು' ಎಂಬ ಷರತ್ತುಗಳನ್ನು ವಿಧಿಸಿ, ಜಾಮೀನು ಮಂಜೂರು ಮಾಡಿದರು.ಮಾರ್ನಿಂಗ್ ಮಿಸ್ಟ್ ಹೋಂಸ್ಟೇನಲ್ಲಿ ಜನ್ಮದಿನದ ಸಂಭ್ರಮಾಚರಣೆಯಲ್ಲಿದ್ದ ಯುವಕ-ಯುವತಿಯರ ಮೇಲೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ನಡೆಸಿದ ಹಲ್ಲೆ, ಕಳೆದ ವರ್ಷ ರಾಷ್ಟ್ರದಾದ್ಯಂತ ಸುದ್ದಿ ಮಾಡಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.