ಗುರುವಾರ , ಮೇ 13, 2021
19 °C

ಮಾಲಿನ್ಯ ತಡೆಗೆ ಪರಿಸರ ಬೆಳೆಸಲು ಕರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: `ನಾಗರಿಕರು ಹೆಚ್ಚಿನ ಪ್ರಮಾಣದಲ್ಲಿ ಗಿಡಮರಗಳು ಬೆಳೆಸುವ ಮೂಲಕ ಪರಿಸರ ಮಾಲಿನ್ಯ  ತಡೆಯಲು ಒತ್ತು ನೀಡಬೇಕು' ಎಂದು ಜಿಲ್ಲಾ ಪ್ರಧಾನ ಸಿವಿಲ್ ನ್ಯಾಯಾಧೀಶ ಸಿ.ಆರ್. ರಾಜಾ ಸೋಮಶೇಖರ್ ಸಲಹೆ ಮಾಡಿದರು.ಜಿಲ್ಲಾ ರಂಗಮಂದಿರದಲ್ಲಿ ಬುಧವಾರ `ವಿಶ್ವ ಪರಿಸರ ದಿನಾಚರಣೆ' ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, `ಪರಿಸರ ಮಾಲಿನ್ಯ ಉಂಟಾಗಲು ಕಾರಣವೇನು ಎಂಬುದನ್ನು ಅರಿತು ಅದನ್ನು ತಡೆಯಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಚರ್ಚೆ ನಡೆಯಬೇಕಾಗಿದೆ' ಎಂದು ಪ್ರತಿಪಾದಿಸಿದರು.`ಜಲ, ವಾಯು ಹಾಗೂ ಶಬ್ದ ಮಾಲಿನ್ಯದಿಂದಾಗಿ ಹಲವು ಕಾಯಿಲೆಗಳು ಹರಡುತ್ತಿವೆ. ಇನ್ನೊಂದೆಡೆ ಶುದ್ಧವಾದ ನೀರು ದೊರೆಯುತ್ತಿಲ್ಲ. ಈ ಕಾರಣಗಳಿಂದಾಗಿ ಕುಡಿಯುವ ನೀರಿನ ಸ್ವಚ್ಛತೆ ಕಾಪಾಡುವುದರ ಬಗೆಗೆ ಗಂಭೀರ ಚಿಂತನೆ ನಡೆಯಬೇಕು' ಎಂದು ಹೇಳಿದರು.`ಆಹಾರದ ಕೊರತೆಯಿಂದಾಗಿ ವಿಶ್ವದಲ್ಲಿ ಪ್ರತಿದಿನ ಏಳು ಜನರಲ್ಲಿ ಒಬ್ಬರು ಹಸಿವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಆಹಾರ ಪದಾರ್ಥಗಳನ್ನು ಅನಾವಶ್ಯಕವಾಗಿ ವ್ಯರ್ಥ ಮಾಡಬಾರದು' ಎಂದು ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ. ಪಿ.ಸಿ. ಜಾಫರ್ ಸಲಹೆ ಮಾಡಿದರು.ಬಿ.ವಿ. ಭೂಮರೆಡ್ಡಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಡಾ. ಸಿ.ಎಸ್. ಪಾಟೀಲ್ ಉಪನ್ಯಾಸ ನೀಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಉಜ್ವಲ್‌ಕುಮಾರ್ ಘೋಷ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ತ್ಯಾಗರಾಜನ್, ಜಿಲ್ಲಾ ಅರಣ್ಯ ಅಧಿಕಾರಿ ಡಾ. ಶಿವರಾಜು, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ.ಕೆ. ಗಾದಗೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್.ಆರ್. ಬಸಪ್ಪ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಮಚಂದ್ರ ಗಂದಗೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಅಧಿಕಾರಿ ಆಸಿಫ್ ಖಾನ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.