ಮಾಲೂರು ಸಾಮರ್ಥ್ಯಸೌಧ ಉದ್ಘಾಟನೆ

7

ಮಾಲೂರು ಸಾಮರ್ಥ್ಯಸೌಧ ಉದ್ಘಾಟನೆ

Published:
Updated:

ಮಾಲೂರು: ಮಹಿಳೆಯರ ಅಭಿವೃದ್ಧಿಗಾಗಿ ನಿರ್ಮಿಸಿರುವ ಸಾಮರ್ಥ್ಯ ಸೌಧ ಮಹಿಳೆಯರ ಕೌಶಲ ಹೆಚ್ಚಿಸಲು ಅನುಕೂಲವಾಗಲಿದೆ ಎಂದು ಶಾಸಕ ಎಸ್.ಎನ್.ಕೃಷ್ಣಯ್ಯಶೆಟ್ಟಿ ತಿಳಿಸಿದರು.ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ನಿರ್ಮಿಸಿರುವ ಸಾಮರ್ಥ್ಯ ಸೌಧ ಕಟ್ಟಡವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದ ಅವರು ಜಿಲ್ಲೆಯಲ್ಲೇ ಮಾದರಿ ಕಟ್ಟಡ ಇದಾಗಿದೆ ಎಂದರು.

ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಸ್.ಆರ್.ಬದರಿನಾಥ್, ಕಿರಿಯ ಎಂಜಿನಿಯರ್ ಜಿ.ನಾರಾಯಣಸ್ವಾಮಿ, ಗುತ್ತಿಗೆದಾರ ಚಂಬೆ ನಾರಾಯಣಸ್ವಾಮಿ ಅವರನ್ನು ಅಭಿನಂದಿಸಲಾಯಿತು.ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಚೌಡೇಶ್ವರಿ, ಉಪಾಧ್ಯಕ್ಷೆ ರತ್ನಮ್ಮ, ಸದಸ್ಯರಾದ ರತ್ನಮ್ಮ ನಂಜೇಗೌಡ, ರಾಮಸ್ವಾಮಿರೆಡ್ಡಿ, ಯಲ್ಲಮ್ಮ, ಯಶೋಧಮ್ಮ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಗೋಪಾಲಗೌಡ, ಉಪಾಧ್ಯಕ್ಷೆ ಅಮರಾವತಿ, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ವಿ.ಲೋಕೇಶ್, ಸದಸ್ಯರು, ಎಪಿಎಂಸಿ ಅಧ್ಯಕ್ಷ ಕೆ.ಆರ್.ಬೀರಪ್ಪ, ಜಿ.ಪಂ. ಮಾಜಿ ಅಧ್ಯಕ್ಷ ಬಿ.ಎಂ.ಕೃಷ್ಣಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜುಲ್ಪಿ ಖಾರ್‌ವುಲ್ಲಾ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರಜನಿಕಾಂತ್‌ಮಲ್ಲಿ ಉಪಸ್ಥಿತರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry