ಮಾಲೂರು: 13 ಜೆಡಿಎಸ್, 10 ಗ್ರಾ.ಪಂ. ಬಿಜೆಪಿ ತೆಕ್ಕೆಗೆ

7

ಮಾಲೂರು: 13 ಜೆಡಿಎಸ್, 10 ಗ್ರಾ.ಪಂ. ಬಿಜೆಪಿ ತೆಕ್ಕೆಗೆ

Published:
Updated:

ಮಾಲೂರು: ತಾಲ್ಲೂಕಿನ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಶನಿವಾರ ಚುನಾವಣೆ ನಡೆದ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಜೆಡಿಎಸ್, ಬಿಜೆಪಿ ಬೆಂಬಲಿಗರು ತಲಾ ಒಂದೊಂದು ಪಂಚಾಯಿತಿಯಲ್ಲಿ ಅಧಿಕಾರ ಹಿಡಿದಿದ್ದಾರೆ.ಹುಂಗೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆ ತೀವ್ರ ಕುತೂಹಲ ಕೆರಳಿಸಿತ್ತು. ಆಡಳಿತಾರೂಢ ಬಿಜೆಪಿ-ಜೆಡಿಎಸ್ ಬೆಂಬಲಿಗರ ಮಧ್ಯೆ ಪ್ರತಿಷ್ಠೆಯಾಗಿದ್ದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿಗರಾದ ರಾಧಮ್ಮ ಕಿಟ್ಟಪ್ಪ 9 ಮತ ಪಡೆದು, ತಮ್ಮ ಪ್ರತಿಸ್ಪರ್ಧಿ ಗೌರಮ್ಮ ಅವರನ್ನು ಎರಡು ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ.ಎಚ್.ಎನ್.ಶ್ರೀನಾಥ್ 9 ಮತ ಪಡೆದು ತಮ್ಮ ಪ್ರತಿಸ್ಪರ್ಧಿ ಮಂಜುನಾಥ್‌ರೆಡ್ಡಿ ಅವರನ್ನು ಎರಡು ಮತಗಳ ಅಂತರದಿಂದ ಪರಾಭವಗೊಳಿಸಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಮಡಿವಾಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ನಾರಾಯಣಮ್ಮ ಲಕ್ಷ್ಮಣ, ಉಪಾಧ್ಯಕ್ಷರಾಗಿ ಟಿ.ಮುನಿರಾಜು ಆಯ್ಕೆಯಾಗಿದ್ದಾರೆ.ತಾಲ್ಲೂಕಿನ 28 ಗ್ರಾಮ ಪಂಚಾಯಿತಿಗಳ ಪೈಕಿ 25 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಜೆಡಿಎಸ್ ಬೆಂಬಲಿಗರು 13, ಬಿಜೆಪಿ ಬೆಂಬಲಿಗರು 10, ಕಾಂಗ್ರೆಸ್ ಬೆಂಬಲಿಗರು ಎರಡು ಪಂಚಾಯಿತಿಗಳಲ್ಲಿ ಅಧಿಕಾರದ ಚುಕಾಣಿ ಹಿಡಿದಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry