ಬುಧವಾರ, ಅಕ್ಟೋಬರ್ 23, 2019
23 °C

ಮಾಲೆಗಾಂವ್: ವಿಚಾರಣೆ ತಡೆ ವಿಸ್ತರಣೆ

Published:
Updated:

ನವದೆಹಲಿ (ಪಿಟಿಐ): ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿಗಳಾದ ಲೆಫ್ಟಿನೆಂಟ್ ಕರ್ನಲ್ ಶ್ರೀಕಾಂತ್ ಪ್ರಸಾದ್ ಪುರೋಹಿತ್ ಹಾಗೂ ಸುಧಾಕರ್ ಧರ್ ದ್ವಿವೇದಿ ಅವರನ್ನು ವಿಚಾರಣೆಗೆ ಒಳಪಡಿಸದಂತೆ ನೀಡಿದ್ದ ತಡೆಯಾಜ್ಞೆಯನ್ನು ಬುಧವಾರ ಸುಪ್ರೀಂಕೋರ್ಟ್ ವಿಸ್ತರಿಸಿದೆ.ಪುರೋಹಿತ್ ಅವರನ್ನು ವಿಚಾರಣೆಗೆ ಒಳಪಡಿಸಲು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಅನುಮತಿ ನೀಡಿ ಬಾಂಬೆ ಹೈಕೋರ್ಟ್ ಆದೇಶ ನೀಡಿತ್ತು.  ಇದನ್ನು ಪ್ರಶ್ನಿಸಿ ಪುರೋಹಿತ್ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.ನ್ಯಾಯಮೂರ್ತಿಗಳಾದ ಎಚ್.ಎಲ್.ದತ್ತು ಹಾಗೂ ಸಿ.ಕೆ.ಪ್ರಸಾದ್ ಅವರನ್ನು ಒಳಗೊಂಡ ಪೀಠವು ಬಾಂಬೆ ಹೈಕೋರ್ಟ್ ಆದೇಶಕ್ಕೆ ನೀಡಿದ್ದ ತಡೆಯನ್ನು ವಿಸ್ತರಿಸಿತು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರದೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಪೀಠವು ರಾಷ್ಟ್ರೀಯ ತನಿಖಾ ದಳ, ಕೇಂದ್ರ ಹಾಗೂ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚನೆ ನೀಡಿ, ಅಂತಿಮ ವಿಚಾರಣೆಯನ್ನು ಎರಡು ವಾರ          ಮುಂದೂಡಿತು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)