ಭಾನುವಾರ, ಡಿಸೆಂಬರ್ 15, 2019
26 °C

ಮಾಲ್ಡೀವ್ಸ್: ನಶೀದ್ ಮುನ್ನಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಲ್ಡೀವ್ಸ್: ನಶೀದ್ ಮುನ್ನಡೆ

ಮಾಲೆ (ಪಿಟಿಐ): ಮಾಲ್ಡೀವ್ಸ್ ದ್ವೀಪ ಸಮೂಹದಲ್ಲಿ ಶನಿವಾರ ನಡೆದ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಪದಚ್ಯುತ ಅಧ್ಯಕ್ಷ ಮೊಹಮ್ಮದ್ ನಶೀದ್ ಅವರು ಆರಂಭಿಕ ಸುತ್ತುಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಮೊದಲ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದ ನಶೀದ್ ಪದಚ್ಯುತಗೊಂಡ 18 ತಿಂಗಳ ಬಳಿಕ ಅಂತರರಾಷ್ಟ್ರೀಯ ವೀಕ್ಷಕರ ಕಣ್ಗಾವಲಿನಲ್ಲಿ ಶನಿವಾರ ಅಧ್ಯಕ್ಷೀಯ ಚುನಾವಣೆ ನಡೆದಿದೆ.ಮಾಲ್ಡೀವ್ಸ್‌ನಾದ್ಯಂತ ಸ್ಥಾಪಿಸಲಾಗಿದ್ದ ಒಟ್ಟು 470 ಮತಗಟ್ಟೆಗಳಲ್ಲಿ ಸಾವಿರಾರು ಜನರು ದೇಶದ ಅಧ್ಯಕ್ಷರ ಆಯ್ಕೆಗಾಗಿ ಮತದಾನ ಮಾಡಿದರು. ನಶೀದ್ ಸೇರಿದಂತೆ ನಾಲ್ವರು ಅಭ್ಯರ್ಥಿಗಳು ಅಧ್ಯಕ್ಷರ ಹುದ್ದೆಗೆ ಸ್ಪರ್ಧಿಸಿದ್ದಾರೆ.

ಪ್ರತಿಕ್ರಿಯಿಸಿ (+)