ಶುಕ್ರವಾರ, ಏಪ್ರಿಲ್ 16, 2021
31 °C

ಮಾವನ ಶವವಿದ್ದ ವಾಹನಕ್ಕೆ ಟಿಪ್ಪರ್ ಡಿಕ್ಕಿ ಅಳಿಯ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ವಿಷ ಸೇವಿಸಿ ಮೃತಪಟ್ಟ ಸೋದರಮಾವನ ಮರಣೋತ್ತರ ಪರೀಕ್ಷೆ ಮಾಡಿಸಿಕೊಂಡು  ಹೆಣ ತೆಗೆದುಕೊಂಡು ಹೋಗುತ್ತಿದ್ದ ಆಂಬುಲೆನ್ಸ್‌ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಅಳಿಯನೂ ಮೃತಪಟ್ಟ ಘಟನೆ ತಾಲ್ಲೂಕಿನ ಶ್ರೀನಿವಾಸ ಸರಡಗಿ ಸಮೀಪ ಬುಧವಾರ ಸಂಜೆ ಸಂಭವಿಸಿದೆ.

ಬಸವರಾಜ ರಾಮಪ್ಪ ವಡ್ಡರ (30) ಮೃತ ದುರ್ದೈವಿ. ಅಂಬುಲೆನ್ಸ್‌ನಲ್ಲಿದ್ದ ಚಾಲಕ ಸೇರಿ ಐವರು ಗಾಯಗೊಂಡಿದ್ದಾರೆ ಎಂದು ವಿಶ್ವವಿದ್ಯಾಲಯ ಠಾಣೆ ಪೊಲೀಸರು ತಿಳಿಸಿದ್ದಾರೆ.

ಬಸವರಾಜ ಸೇಡಂ ತಾಲ್ಲೂಕಿನ ಸಿಂದನಮಡು ಗ್ರಾಮದ ನಿವಾಸಿ. ವಿಷ ಸೇವಿಸಿ ಮಂಗಳವಾರ ಆತ್ಮಹತ್ಯೆಗೆ ಯತ್ನಿಸಿದ್ದ ತನ್ನ ಸೋದರಮಾವನನ್ನು ಗುಲ್ಬರ್ಗ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮಾವ ಆಸ್ಪತ್ರೆಯಲ್ಲಿ ಮೃತಪಟ್ಟ. ಮಾವನ ಹೆಣವನ್ನು ಗ್ರಾಮಕ್ಕೆ ಅಂಬುಲೆನ್ಸ್‌ನಲ್ಲಿ ತೆಗೆದುಕೊಂಡು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.