ಮಾಸಾಶನ ಮಂಜೂರಾತಿಗೆ ಆಗ್ರಹ

7

ಮಾಸಾಶನ ಮಂಜೂರಾತಿಗೆ ಆಗ್ರಹ

Published:
Updated:

ಚಿತ್ರದುರ್ಗ: ಮಾಸಾಶನ ಮಂಜೂರು ಮಾಡುವಂತೆ ಒತ್ತಾಯಿಸಿ ತಾಲ್ಲೂಕಿನ ಜೆ.ಎನ್.ಕೋಟೆ ಅಂಗವಿಕಲರು, ವಿಧವೆಯರು, ವಯೋವೃದ್ಧರು ಶುಕ್ರವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.ಮಾಸಾಶನ ತಮ್ಮ ಬದುಕಿಗೆ ನೆರವಾಗಿತ್ತು. ಆದರೆ, ಈಗ ಸರ್ಕಾರ ಹಲವಾರು ಕಾರಣಗಳನ್ನು ನೀಡಿ ತಡೆ ಹಿಡಿದಿರುವುದರಿಂದ ತಾವು ಬದುಕು ಸಾಗಿಸುವುದು ಕಷ್ಟವಾಗಿದೆ ಎಂದು ದೂರು ಸಲ್ಲಿಸಿದರು.ಮಾಸಾಶನದಲ್ಲಿ ಔಷಧಿ ಹಾಗೂ ಇತರೆ ಖರ್ಚುಗಳನ್ನು ನಿಭಾಯಿಸಲಾಗುತ್ತಿತ್ತು. ಸರ್ಕಾರ ಈಗ ಸುಮಾರು 10 ತಿಂಗಳಿಂದ ಮಾಸಾಶನ ನೀಡಿಲ್ಲ. ತಮಗೆ ಕೂಲಿ ಕೆಲಸಕ್ಕೆ ಹೋಗಲು ಶಕ್ತಿ ಇಲ್ಲ. ಮಾಸಾಶನ ಒಂದೇ ತಮ್ಮ ಬದುಕಿಗೆ ಆಧಾರವಾಗಿತ್ತು. ಈಗ ಅದನ್ನು ನಿಲ್ಲಿಸಿರುವುದರಿಂದ ಸಂಕಷ್ಟಕ್ಕೆ ಸಿಲುಕಿದ್ದೇವೆ.ಔಷಧಿ ಖರೀದಿಗೂ ಹಣವಿಲ್ಲದೆ ಆರೋಗ್ಯ ಹದಗೆಡುತ್ತಿದೆ ಎಂದು ತಿಳಿಸಿದರು.ಸಂಕಷ್ಟದಲ್ಲೇ ಬದುಕು ಸಾಗಿಸುವ ಅಂಗವಿಕಲರು, ವಿಧವೆಯರು, ವೃದ್ಧರಿಗೆ ಮಾಸಾಶನ ನಿಲ್ಲಿಸಿರುವುದು ತಪ್ಪು. ಪ್ರತಿನಿತ್ಯ ಸರ್ಕಾರಿ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಬಂದೊದಗಿದೆ. ಸರ್ಕಾರ ತಮ್ಮ ಬಗ್ಗೆ ಸಹಾನುಭೂತಿ ತೋರಿಸಲಿ ಎಂದು ಕೋರಿದರು.ಸಾಮಾಜಿಕ ಭದ್ರತಾ ಯೋಜನೆಯ ನಿಜವಾದ ಫಲಾನುಭವಿಗಳನ್ನು ಗುರುತಿಸಿ ಸರ್ಕಾರ ಮಾಸಾಶನ ನೀಡಲಿ. ಆದರೆ ಈ ಕಾರ್ಯವನ್ನು ತ್ವರಿತ ಗತಿಯಲ್ಲಿ ಕೈಗೊಳ್ಳಲಿ. ಅಲ್ಲಿವರೆಗೂ ಮಾಸಾಶನ ನಿಲ್ಲಿಸುವುದು ಬೇಡ. ನಿಜವಾದ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳು ತಲುಪಬೇಕೆನ್ನುವುದು ತಮ್ಮ ಆಶಯ.

 

ಆದರೆ, ಈ ಬಗ್ಗೆ ಯಾವುದೇ ರೀತಿಯ ವಿಳಂಬ ಸಲ್ಲದು. ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಆದ್ದರಿಂದ ತಮ್ಮ ಬದುಕಿಗೆ ಆಧಾರವಾಗಿರುವ ಮಾಸಾಶನವನ್ನು ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry