ಮಂಗಳವಾರ, ಮೇ 11, 2021
25 °C

ಮಾಹಿತಿ ನೀಡದ ಅರಣ್ಯಾಧಿಕಾರಿಗೆ ತರಾಟೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೆಣಸೂರು (ನರಸಿಂಹರಾಜಪುರ):  ಅರಣ್ಯ ಇಲಾಖೆಯಿಂದ ಗ್ರಾಮಸ್ಥರಿಗೆ ಸರಿಯಾದ ಮಾಹಿತಿಯನ್ನು ನೀಡಲು ವಿಫಲವಾದ ಅರಣ್ಯ ಇಲಾಖೆ ಅಧಿಕಾರಿಯನ್ನು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಜೆ.ಜಿ.ನಾಗರಾಜ್ ತೀವ್ರ ತರಾಟೆಗೆ ತೆಗೆದುಕೊಂಡರು.ತಾಲ್ಲೂಕಿನ ಮೆಣಸೂರು ಗ್ರಾಮದಲ್ಲಿ ಬುಧವಾರ ನಡೆದ ಗ್ರಾಮ ಸಭೆಯಲ್ಲಿ ಅರಣ್ಯ ಇಲಾಖೆಯ ಸರತಿ ಬಂದಾಗ ಇಲಾಖೆಯ ಕಚೇರಿಯಲ್ಲಿ ಮಾಹಿತಿ ಲಭ್ಯವಾಗುತ್ತದೆ ಎಂದು ಅರಣ್ಯ ಅಧಿಕಾರಿ ತಿಳಿಸಿದರು. ಇದರಿಂದ ಕೂಪಗೊಂಡ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಜೆ.ಜಿ.ನಾಗರಾಜ್, ಮಾಹಿತಿ ಇಲ್ಲದೆ ಸಭೆಗೆ ಬಂದರೆ ಸಭೆಯಿಂದ ಹೊರಗೆ ಕಳುಹಿಸುವುದಾಗಿ ತರಾಟೆಗೆ ತೆಗೆದುಕೊಂಡರು. ನಂತರ ಅಧಿಕಾರಿ ಇಲಾಖೆಯಿಂದ ಮಾಹಿತಿ ಪಡೆದು ಸಭೆ ತಿಳಿಸಿದರು.ಮಳೆಗಾಲ ಪ್ರಾರಂಭವಾಗಿದ್ದು, ಗ್ರಾಮದ ಸಾಕಷ್ಟು ರಸ್ತೆಯ ಮೋರಿಗಳಲ್ಲಿ ಮಣ್ಣುಶೇಖರವಾಗಿದ್ದು ಇದನ್ನು ದುರಸ್ತಿಪಡಿಸಬೇಕೆಂದು ಗ್ರಾಮಸ್ಥರು ಸಭೆಯ ಗಮನಕ್ಕೆ ತಂದರು. ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ಹಾಗೂ ಟಾರ್ಪಲ್ ವಿತರಿಸಲಾಗುತ್ತಿದೆ ಎಂದು ಕೃಷಿ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.ತೋಟಗಾರಿಕಾ ಇಲಾಖೆಯಿಂದ ರಾಷ್ಟ್ರೀಯ ತೋಟಗಾರಿಕಾ ಮಿಷನ್ ಯೋಜನೆಯಡಿ ಜುಲೈ, ಆಗಸ್ಟ್ ತಿಂಗಳಲ್ಲಿ ಕಾಳು ಮೆಣಸು ಬಳ್ಳಿ ವಿತರಿಸಲಾಗುತ್ತದೆ. ಅಲ್ಲದೆ ಪ್ರತಿ ಗ್ರಾಮ ಪಂಚಾಯಿತಿಯಿಂದ 4 ಫಲಾನುಭವಿಗಳಿಗೆ ತೆಂಗಿನ ಸಸಿ ವಿತರಿಸಲಾಗುತ್ತದೆ ಎಂದು ತೋಟ ಗಾರಿಕಾ ಅಧಿಕಾರಿ ತಿಳಿಸಿದರು.6 ವರ್ಷದೊಳಗಿನ ಎಲ್ಲಾ ಮಕ್ಕಳನ್ನು ಅಂಗನವಾಡಿಯಲ್ಲಿ ತೂಕ ಮಾಡಿಸಬೇಕು. ಅಪೌಷ್ಟಿಕತೆಯಿಂದ ನರಳುತ್ತಿರುವ ಮಕ್ಕಳಿಗೆ ಇಲಾಖೆಯಿಂದ ಹಾಲು, ಮೊಟ್ಟೆ ನೀಡಲಾಗುತ್ತದೆ ಎಂದರು. ತೀವ್ರ ತರಹದ ಅನಾರೋಗ್ಯದಿಂದ ಬಳಲುತ್ತಿರುವ ಮಗುವಿಗೆ ಬಾಲ ಸಂಜೀವಿನಿ ಯೋಜನೆಯಡಿ ಚಿಕಿತ್ಸೆ ಕೊಡಿಸಲಾಗುವುದು ಎಂದು ಸಿಡಿಪಿಓ ಇಲಾಖೆಯ ಅಧಿಕಾರಿ ತಿಳಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಾಥ್ ಅಧ್ಯಕ್ಷತೆ ವಹಿಸಿದ್ದರು.ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಜೆ.ಜಿ.ನಾಗರಾಜ್, ಮೆಣಸೂರು ಗ್ರಾ.ಪಂ ಉಪಾಧ್ಯಕ್ಷೆ ವನಜಾಕ್ಷಿ, ಸದಸ್ಯರಾದ ಅನಿಲ್, ರತ್ನಾಕರ್ ಆಚಾರ್, ನೋಡಲ್ ಅಧಿಕಾರಿ ಬಿ.ಜಿ.ಮಾಳಮ್ಮನವರ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.