ಭಾನುವಾರ, ಜನವರಿ 19, 2020
23 °C

ಮಾಹಿತಿ ನೀಡಲು ಪಿಎಂಒ ನಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): 2010ರ ಕಾಮನ್‌ವೆಲ್ತ್‌ ಕ್ರೀಡಾಕೂಟಕ್ಕೆ ಸಂಬಂಧಿಸಿದ ಯೋಜನೆಗಳಲ್ಲಿ ನಡೆದ ಅವ್ಯವಹಾರಗಳ ತನಿಖೆ ನಡೆಸಿದ್ದ ಶುಂಗ್ಲು ಸಮಿತಿಯು ಮಾಡಿದ್ದ ಶಿಫಾರಸುಗಳ ಮೇರೆಗೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಲು ಪ್ರಧಾನಿ ಕಚೇರಿ (ಪಿಎಂಒ) ನಿರಾಕರಿಸಿದೆ.ಮಾಹಿತಿ ಹಕ್ಕು ಕಾಯ್ದೆಯ ಅಡಿಯಲ್ಲಿ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿ­ಸಿರುವ ಪ್ರಧಾನಿ ಕಚೇರಿ ಸಮಿತಿಯ ಶಿಫಾರಸುಗಳನ್ನು ವಿಶೇಷಾಧಿ­ಕಾರದ ಸಚಿವರ ತಂಡ ನಡೆಸಿದ್ದು, ಅದು ಮಾಹಿತಿ ಹಕ್ಕು ಕಾಯ್ದೆಯಿಂದ ವಿನಾಯಿತಿ ಪಡೆದಿದೆ ಎಂದು ಹೇಳಿದೆ.

ಪ್ರತಿಕ್ರಿಯಿಸಿ (+)