ಯಾದಗಿರಿ: ಮಾಹಿತಿ ಹಕ್ಕು ಅಧಿನಿಯಮದ ಅಡಿ ಸಾರ್ವಜನಿಕರಿಂದ ಬರುವ ವಿವಿಧ ಅರ್ಜಿಗಳನ್ನು ಅಧಿಕಾರಿಗಳು ಸಕಾಲಕ್ಕೆ ವಿಲೇವಾರಿ ಮಾಡಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಜಹೀರಾ ನಸೀಮ್ ಸಲಹೆ ಮಾಡಿದರು.

ಮೈಸೂರು ಆಡಳಿತ ತರಬೇತಿ ಸಂಸ್ಥೆ, ಜಿಲ್ಲಾಡಳಿತಗಳ ಆಶ್ರಯದಲ್ಲಿ ಇಲ್ಲಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿರುವ ಮಾಹಿತಿ ಹಕ್ಕು ಅಧಿನಿಯಮ ಕುರಿತಾದ ಎರಡು ದಿನಗಳ ತರಬೇತಿ ಕಾರ್ಯಾಗಾರ ಉದ್ಫಾಟಿಸಿ ಅವರು ಮಾತನಾಡಿದರು.

ಸಾರ್ವಜನಿಕರಿಂದ ವಿವಿಧ ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಮಾಹಿತಿ ಹಕ್ಕು ಅಧಿನಿಯಮದಡಿಬರುವ ಅರ್ಜಿಗಳಿಗೆ ಸಕಾಲಕ್ಕೆ ಸ್ಪಂದಿಸಿ ಅರ್ಜಿ ವಿಲೇವಾರಿ ಮಾಡಿದಾಗ ಮಾತ್ರ ಈ ಕಾಯ್ದೆಯ ಉದ್ದೇಶ ಈಡೇರುತ್ತದೆ. ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕತೆ, ಉತ್ತರದಾಯಿತ್ವ ತರುವ ಉದ್ದೇಶದಿಂದ ಈ ಕಾಯ್ದೆ ಜಾರಿಗೊಳಿಸಿದ್ದು, ಇದರ ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲ ಅಧಿಕಾರಿಗಳು ಸಹಕರಿಸಬೇಕು ಎಂದು ತಿಳಿಸಿದರು.

ಸಹಾಯಕ ಆಯುಕ್ತ ಬಿ.ಪಿ. ವಿಜಯ, ಪಾರದರ್ಶಕ ಮತ್ತು ಉತ್ತಮ ಆಡಳಿತ ನೀಡುವುದರ ಜೊತೆಗೆ ಸರ್ಕಾರಿ ಇಲಾಖೆಗಳಲ್ಲಿ ಉತ್ತರದಾಯಿತ್ವ ಹೆಚ್ಚಿಸಲು ಆರ್.ಟಿ.ಐ. ಕಾಯ್ದೆ ಜಾರಿಗೊಳಿಸಿದೆ. ಈ ಕಾಯ್ದೆಯ ಸದ್ಬಳಕೆ ಆಗಬೇಕು. ಈ ಕಾಯ್ದೆಯ ದುರುಪಯೋಗ ಆಗದಂತೆ ಸಾರ್ವಜನಿಕರಿಗೆ ಜಾಗೃತಿ ಮತ್ತು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ತರಬೇತಿ ಸಂಸ್ಥೆಗೆ ಸಲಹೆ ನೀಡಿದರು.

ಆಡಳಿತ ತರಬೇತಿ ಸಂಸ್ಥೆಯ ಬೋಧಕ ಕೆ.ಎಂ. ಪ್ರಸಾದ, ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಆಡಳಿತವನ್ನು ನೀಡಿದ್ದೇ ಆದಲ್ಲಿ ಮಾಹಿತಿ ಹಕ್ಕು ಕಾಯ್ದೆ ಜಾರಿಗೆ ತರುವ ಅವಶ್ಯಕತೆ ಇರಲಿಲ್ಲ. ಜನಸಾಮಾನ್ಯರು ನಮ್ಮ ಪ್ರಭು ಎನ್ನುವುದನ್ನು ಮಾಹಿತಿ ಹಕ್ಕು ಕಾಯ್ದೆ ನೆನಪಿಸುತ್ತದೆ ಎಂದು ತಿಳಿಸಿದರು.

ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ ತರುವುದಕ್ಕೆ ಈ ಕಾಯ್ದೆ ಅವಶ್ಯವಾಗಿದೆ. ಕೆಲವು ಕಡೆ ಈ ಕಾಯ್ದೆ ದುರುಪಯೋಗ ಆಗುತ್ತಿದೆ ಎಂಬ ದೂರುಗಳು ಬರುತ್ತಿವೆ. ಇದೆಲ್ಲ ಸಾಮಾನ್ಯ. ಎಷ್ಟು ಅಧಿಕಾರಿಗಳು ತಮ್ಮ ಮಕ್ಕಳನ್ನು ಶಾಲೆಗೆ ಬಿಟ್ಟು ಬರಲು ಸರ್ಕಾರಿ ವಾಹನ ಬಳಸುವುದಿಲ್ಲ ಹೇಳಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಅಧಿಕಾರಿಗಳು ಯಾವಾಗಲೂ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಯೋಚಿಸಬೇಕೇ ವಿನಾ ದುರುಪಯೋಗದ ಬಗ್ಗೆ ಅಲ್ಲ ಎಂದರು.

ಗುಲ್ಬರ್ಗ ಡಿ.ಟಿ.ಐ. ಪ್ರಾಂಶುಪಾಲ ಅಂಬೋಜಿ, ಪ್ರೊಬೇಷನರಿ ಉಪವಿಭಾಗ ಅಧಿಕಾರಿ ಪರಶುರಾಮ ಮಾದರ, ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.