ಸೋಮವಾರ, ಮೇ 23, 2022
28 °C

ಮಾಹಿತಿ ಹಕ್ಕು ಕಾಯಿದೆ ದುರ್ಬಲಗೊಳಿಸುವುದಿಲ್ಲ: ಪ್ರಧಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 

ನವದೆಹಲಿ, (ಪಿಟಿಐ):  ಮಾಹಿತಿ ಹಕ್ಕು ಕಾಯಿದೆಯನ್ನು ದುರ್ಬಲಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಪ್ರಧಾನಿ ಮನಮೋಹನ್ ಸಿಂಗ್ ಅವರು, ಮಾಹಿತಿ ಹಕ್ಕು ಕಾಯಿದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಲು ಸರ್ಕಾರ ಆಸಕ್ತಿ ಹೊಂದಿದೆ, ಆದರೆ ಕೆಲವು ಸಂಗತಿಗಳಲ್ಲಿ ಪಾರದರ್ಶಕತೆ ಮತ್ತು ವಿಮರ್ಶೆ ಅಗತ್ಯ ಎಂದು ಪ್ರತಿಪಾದಿಸಿದ್ದಾರೆ.

ಶುಕ್ರವಾರ ಇಲ್ಲಿ ಏರ್ಪಡಿಸಿದ್ದ ಕೇಂದ್ರ ಮಾಹಿತಿ ಹಕ್ಕು ಆಯುಕ್ತರ ಎರಡು ದಿನಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ~ಮಾಹಿತಿ ಹಕ್ಕು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೆ ಬರಬೇಕು, ಜೊತೆಗೆ ಪಾರದರ್ಶಕತೆ ಇರಬೇಕು. ಅಲ್ಲದೇ ಉತ್ತರದಾಯಿತ್ವವನ್ನೂ ಹೊಂದಿರಬೇಕು~ ಎಂದು ಅವರು ಹೇಳಿದರು.

~ಪಾರದರ್ಶಕವಾದ ಈ ಕಾನೂನು ಸರ್ಕಾರದ ಕಾರ್ಯವಿಧಾನಕ್ಕೆ ಅಡ್ಡಿಯಾಗಬಾರದು, ಜೊತೆಗೆ ಪ್ರಾಮಾಣಿಕ ಅಧಿಕಾರಿಗಳ ಉತ್ಸಾಹವನ್ನು ಕುಂದಿಸುವಂತಾಗಬಾರದು~ ಎಂದು ಅವರು ತಮ್ಮ ಆತಂಕ ವ್ಯಕ್ತಪಡಿಸಿದರು.

~ಮಾಹಿತಿ ಬಹಿರಂಗ ಮತ್ತು ನಿಗದಿತ ಸಂಪನ್ಮೂಲ ಮತ್ತು ಸಮಯದ ಅಭಾವ ಎದುರಿಸುತ್ತಿರುವ ಸರ್ಕಾರಿ ಉದ್ಯೋಗಿಗಳ ನಡುವೆ ಸಮತೋಲನ ಸಾಧಿಸುವುದು ತುರ್ತು ಅಗತ್ಯವಾಗಿದೆ~ ಎಂದು ಅವರು ನುಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.