ಕಾರವಾರ:  ಸ್ವಾತಂತ್ರ್ಯ ಬಂದ ನಂತರ ಜಾರಿಗೆ ಬಂದ ಮಾಹಿತಿಹಕ್ಕು ಕಾಯ್ದೆ ಜನಸಾಮಾನ್ಯರಿಗೆ ಸಹಕಾರಿಯಾಗಿದೆ. ಅದನ್ನು ದುರುಪಯೋಗಪಡಿಸಿಕೊಳ್ಳದೆ ಪ್ರತಿಯೊಬ್ಬರೂ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ರಾಜ್ಯ ಮಾಹಿತಿಹಕ್ಕು ಆಯೋಗದ ಆಯುಕ್ತ ಜೆ.ಎಸ್. ವಿರೂಪಾಕ್ಷಯ್ಯ ಹೇಳಿದರು.

ನಗರದ ಗುರುಭವನದಲ್ಲಿ ವಾರ್ತಾ ಮತ್ತು ಪ್ರಚಾರ ಇಲಾಖೆಯ ಸಂಗೀತ ಮತ್ತು ನಾಟಕ ವಿಭಾಗ, ನವದೆಹಲಿಯ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹಾಗೂ ಜಿಲ್ಲಾಡಳಿತದ ಆಶ್ರಯದಲ್ಲಿ ವಿಭಾಗದ ನೊಂದಾಯಿತ ಕಲಾತಂಡಗಳಿಗೆ `ಮಾಹಿತಿ ಹಕ್ಕು ಕಾಯಿದೆ 2005ರ ಬಗ್ಗೆ ಜಾಗೃತಿ ಸೃಷ್ಟಿ~ ಕುರಿತ ಕಮ್ಮಟ ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದೆ ಸರ್ಕಾರಿ ಅಧಿಕಾರಿಗಳು ಮತ್ತು ಸಾರ್ವಜನಿಕರ ನಡುವೆ ಸಾಕಷ್ಟು ಅಂತರವಿತ್ತು. ಅಧಿಕಾರಿಗಳನ್ನು ಪ್ರಶ್ನಿಸುವವರು ಇರಲಿಲ್ಲ. ಇದರಿಂದ ಅಧಿಕಾರ ದುರುಪಯೋಗ ಆಗುತ್ತಿತ್ತು. ಇದೂ ಅಲ್ಲದೇ ಅನೇಕ ಯೋಜನೆಗಳು, ಅವುಗಳ ಸ್ಥಿತಿಗತಿಗಳ ಬಗ್ಗೆ ಜನಸಾಮಾನ್ಯರಿಗೆ ತಿಳಿಯುತ್ತಿರಲಿಲ್ಲ. ಮಾಹಿತಿ ಹಕ್ಕಿನಿಂದ ಇವುಗಳ ಬಗ್ಗೆ ತಿಳಿದುಕೊಳ್ಳಲು ಸಹಾಯವಾಗಿದೆ ಎಂದರು.

ಕಾರ್ಯಕ್ರಮ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಅಪರ ಜಿಲ್ಲಾಧಿಕಾರಿ ಡಾ. ನರಸಿಂಹಮೂರ್ತಿ ಮಾತನಾಡಿ, ಮಾಹಿತಿ ಹಕ್ಕು ಕಾಯಿದೆಯನ್ನು ದೇಶದ ಪ್ರತಿಯೊಬ್ಬ ಪ್ರಜೆಯೂ ಅರ್ಥಮಾಡಿಕೊಳ್ಳಬೇಕು ಹಾಗೂ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

ಮಾಹಿತಿ ಹಕ್ಕಿನಡಿ ಮಾಹಿತಿ ಕೇಳುವ ವಿಧಾನ ವಿವರಿಸಿದ ಆಯುಕ್ತ ವಿರೂಪಾಕ್ಷಯ ಸಾರ್ವಜನಿಕರ ಪ್ರಶ್ನೆಗಳಿಗೂ ಈ ಸಂದರ್ಭದಲ್ಲಿ ಉತ್ತರ ನೀಡಿದರು. ಸಂಗೀತ ಮತ್ತು ನಾಟಕ ವಿಭಾಗದ ಉಪ ನಿರ್ದೇಶಕ ಪುರುಷೋತ್ತಮ ಗಂಗುರ್ಡೆ, ಮಂಜುನಾಥ ಮುದ್ಗೇಕರ್, ಪುರುಷೋತ್ತಮ ಗೌಡ ವೇದಿಕೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.