ಶುಕ್ರವಾರ, ಏಪ್ರಿಲ್ 16, 2021
20 °C

ಮಾಹಿತಿ ಹಕ್ಕು ತಿದ್ದುಪಡಿ ಪ್ರಸ್ತಾವ ವಾಪಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಸಾಮಾಜಿಕ ಮತ್ತು ಅಭಿವೃದ್ಧಿ ವಿಷಯಗಳಿಗೆ ಸಂಬಂಧಿಸಿದ ಕಡತಗಳ ಮೇಲಿನ ಟಿಪ್ಟಣಿಗಳನ್ನು ಮಾತ್ರ ಬಹಿರಂಗಗೊಳಿಸಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮಾಹಿತಿ ಹಕ್ಕು ಕಾಯಿದೆಗೆ ತಿದ್ದುಪಡಿ ತರುವ ವಿವಾದಾತ್ಮಕ ಪ್ರಸ್ತಾವವನ್ನು ಕೇಂದ್ರ ಸರ್ಕಾರ ಕಡೆಗೂ ವಾಪಸ್ ಪಡೆದಿದೆ.ಪ್ರಧಾನಿ ಮನಮೋಹನ್ ಸಿಂಗ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.ಮಾಹಿತಿ ಹಕ್ಕು ಕಾರ್ಯಕರ್ತರು ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಈ ವಿವಾದಾತ್ಮಕ ಪ್ರಸ್ತಾವಕ್ಕೆ ವಿರೋಧ ವ್ಯಕ್ತವಾಗಿತ್ತು.ಹೀಗಾಗಿ ಜನರು, ಸರ್ಕಾರಿ ಇಲಾಖೆಗಳಿಂದ ಬಹುಪಾಲು ವಿಷಯಗಳಿಗೆ ಸಂಬಂಧಿಸಿದಂತೆ ಕಡತದಲ್ಲಿನ ಟಿಪ್ಪಣಿಗಳನ್ನು ಬಹಿರಂಗಪಡಿಸಲು ಕೋರಬಹುದು.ರಾಷ್ಟ್ರೀಯ ಭದ್ರತೆ, ಖಾಸಗಿತನ ಹಾಗೂ ವಾಣಿಜ್ಯ ಹಿತಾಸಕ್ತಿಯ ವಿಷಯಗಳ ಮಾಹಿತಿ ಕೋರಿಕೆಯನ್ನು ತಿರಸ್ಕರಿಸಲು ಅವಕಾಶ ನೀಡಲಾಗಿದೆ.

 

 

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.