ಮಂಗಳವಾರ, ಜೂನ್ 15, 2021
26 °C

ಮಾ.10ಕ್ಕೆ ಕಾರ್ಯಪ್ಪ ನೆನಪು-ನಮನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶನಿವಾರಸಂತೆ: ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಹುಟ್ಟೂರು ಶನಿವಾರಸಂತೆಯಲ್ಲಿ ಮಾ. 10ರಂದು ಬೆಳಿಗ್ಗೆ 11 ಗಂಟೆಗೆ ಭಾರತಿ ವಿದ್ಯಾಸಂಸ್ಥೆ ಹಾಗೂ ಸರ್ಕಾರಿ ಮಾಧ್ಯಮಿಕ ಶಾಲಾ ಕ್ರೀಡಾಂಗಣದಲ್ಲಿ  ಕಾರ್ಯಪ್ಪ `ನೆನಪು-ನಮನ~ ಕಾರ್ಯಕ್ರಮ ಏರ್ಪಡಿಸಲಾಗಿದೆ.ಗ್ರಾಮ ಪಂಚಾಯಿತಿ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸ್ಮರಣ ಸಮಿತಿ, ಮಾಜಿ ಸೈನಿಕರ ಸಂಘ ಹಾಗೂ ಕಾರ್ಯಪ್ಪ ಅಭಿಮಾನಿ ಬಳಗ ಈ ಕಾರ್ಯಕ್ರಮ ಆಯೋಜಿಸಿದೆ. ನಾಡೋಜ ಡಾ. ಪಾಟೀಲ್ ಪುಟ್ಟಪ್ಪ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ ನಾಮಫಲಕ ಅನಾವರಣಗೊಳಿಸುವರು.

 

ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಶಂಕರ್ ಎಂ.ಬಿದರಿ, ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್, ಹೈಕೋರ್ಟ್‌ನ ರಾಜ್ಯ ಸರ್ಕಾರಿ ಅಭಿಯೋಜಕ ಎಚ್.ಎಸ್. ಚಂದ್ರಮೌಳಿ, ಸಂಸದ ಎ.ಎಚ್.ವಿಶ್ವನಾಥ್, ವಿಧಾನ ಪರಿಷತ್ ಸದಸ್ಯರಾದ ಎಂ.ಸಿ.ನಾಣಯ್ಯ, ಟಿ.ಜಾನ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರವಿಕುಶಾಲಪ್ಪ, ಮಾಜಿ ಶಾಸಕರಾದ ಜೀವಿಜಯ, ಬಿ.ಬಿ.ಶಿವಪ್ಪ, ಎಸ್. ಜಿ.ಮೇದಪ್ಪ, ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಟಿ.ಪಿ.ರಮೇಶ್, ಹಾಲು ಮಹಾಮಂಡಳಿ ನಿರ್ದೇಶಕ ಎ.ಎಸ್.ಪ್ರೇಮ್‌ನಾಥ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಡಿ.ಬಿ.ಧರ್ಮಪ್ಪ, ಚಂದ್ರಿಕಾಯೋಗೇಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಲೋಕೇಶ್‌ಕುಮಾರ್, ಸವಿತಾಸತೀಶ್, ಜೆ.ಆರ್.ಫಾಲಾಕ್ಷ, ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್.ಎನ್.ರಘು  ಇತರರು ಪಾಲ್ಗೊಳ್ಳುವರು.ಅಂದು ಬೆಳಿಗ್ಗೆ 8.30ಕ್ಕೆ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ವಿವಿಧ ಕಲಾತಂಡಗಳಿಂದ ವಾದ್ಯಗೋಷ್ಠಿ ಮೆರವಣಿಗೆ, ಮಧ್ಯಾಹ್ನ ಬೆಂಗಳೂರಿನ ಡಾ.ನಾರಾಯಣ ಸ್ವಾಮಿ ಮತ್ತು ತಂಡದವರಿಂದ ಗೀತಾ-ಗಾಯನ ಹಾಗೂ ಸಂಸ ಕಲಾವಿದರಿಂದ ಶ್ರೀಕೃಷ್ಣ ಸಂಧಾನ ನಾಟಕ ಪ್ರದರ್ಶನವಿದೆ ಎಂದು ಪ್ರಕಟಣೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.