ಮಾ.11ರಿಂದ ವಿಶ್ವ ಕನ್ನಡ ಸಮ್ಮೇಳನ

7

ಮಾ.11ರಿಂದ ವಿಶ್ವ ಕನ್ನಡ ಸಮ್ಮೇಳನ

Published:
Updated:

ಬೆಳಗಾವಿ:  ‘ವಿಶ್ವ ಕನ್ನಡ ಸಮ್ಮೇಳನವನ್ನು ಮಾರ್ಚ್ 11 ರಿಂದ ಮೂರು ದಿನ ಆಯೋಜಿಸಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುವಾರ ಇಲ್ಲಿ ತಿಳಿಸಿದರು.

ಫೆ. 26ರಿಂದ ಮೂರು ದಿನಗಳ ಕಾಲ ವಿಶ್ವ ಕನ್ನಡ ಸಮ್ಮೇಳನ ನಡೆಸಲಾಗುವುದು ಎಂದು ಸರ್ಕಾರ ಈ ಮೊದಲು ಪ್ರಕಟಿಸಿತ್ತು. ಆದರೆ ‘ಫೆಬ್ರುವರಿಯಲ್ಲಿ ಜನಗಣತಿ ನಡೆಯುವುದರಿಂದ ಮಾರ್ಚ್ ಎರಡನೇ ವಾರದಲ್ಲಿ ಸಮ್ಮೇಳನ ನಡೆಸಲು ಉದ್ದೇಶಿಸಲಾಗಿದೆ. ಚುನಾವಣೆ ಮುಗಿದ ಕೂಡಲೇ ಜಿಲ್ಲಾಡಳಿತ ಸಮ್ಮೇಳನದ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಲಿದೆ’ ಎಂದರು.

‘ಚಳಿಗಾಲ ಅಧಿವೇಶನದ ದಿನಾಂಕವನ್ನು ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ನಂತರ ನಿರ್ಧರಿಸಲಾಗುವುದು’ ಎಂದ ಅವರು, ಬೆಳಗಾವಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸುವ ಬಗ್ಗೆ ಖಚಿತವಾಗಿ ಹೇಳಲಿಲ್ಲ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry