ಮಾ.6, 7ರಂದು ಲಕ್ಕುಂಡಿ ಉತ್ಸವ

7

ಮಾ.6, 7ರಂದು ಲಕ್ಕುಂಡಿ ಉತ್ಸವ

Published:
Updated:

ಗದಗ: ಐತಿಹಾಸಿಕ ಲಕ್ಕುಂಡಿ ಉತ್ಸವವನ್ನು ಮಾರ್ಚ್ 6 ಮತ್ತು 7ರಂದು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿದರು. ತಾಲ್ಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದದರು. ಈ ಹಿಂದೆ ನಡೆದ ಉತ್ಸವದಲ್ಲಿನ ನ್ಯೂನತೆಗಳನ್ನು ಸರಿಪಡಿಸಿಕೊಂಡು ಯಾವುದೇ ರೀತಿ ಕೊರತೆ ಕಂಡು ಬರದ ರೀತಿಯಲ್ಲಿ ಆಚರಿಸಲು ಸಹಕಾರ ನೀಡಬೇಕು ಎಂದು ಅಧಿಕಾರಿಗಳು ಸಲಹೆ ನೀಡಿದರು.ವೆಂಕಣ್ಣ ಜೋಶಿ ಮಾತನಾಡಿ, ಉತ್ಸವದ ನೆನಪಿಗಾಗಿ ಗ್ರಾಮದಲ್ಲಿ ಶಾಶ್ವತವಾದ ಕಾರ್ಯ ನಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಗ್ರಾಮದ ಪ್ರಮುಖ ರಸ್ತೆಯಲ್ಲಿ ದ್ವಾರ ಬಾಗಿಲು ನಿರ್ಮಾಣವಾಗಬೇಕು. ಸ್ಮಾರಕಗಳ ರಕ್ಷಣೆ ಮಾಡುವುದು ಅಗತ್ಯವಾಗಿದೆ ಎಂದು ಹೇಳಿದರು. ಸರ್ ಸಿದ್ದಪ್ಪ ಕಂಬಳಿ ಅವರ ಪುತ್ಥಳಿಯನ್ನು ಗ್ರಾಮದಲ್ಲಿ ಸ್ಥಾಪಿಸಬೇಕು. ಪ್ರತಿವರ್ಷ ತಪ್ಪದೆ ಉತ್ಸವ ಆಚರಿಸಬೇಕು ಎಂದು ಗ್ರಾಮಸ್ಥರು ಒಕ್ಕೊರಲಿನಿಂದ ಅಭಿಪ್ರಾಯ ವ್ಯಕ್ತಪಡಿಸಿದರು.ಸಭೆಯಲ್ಲಿ ಮಾಜಿ ಸಚಿವ ಎಸ್.ಎಸ್. ಪಾಟೀಲ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಚಂಬವ್ವ ಪಾಟೀಲ, ಉಪಾಧ್ಯಕ್ಷ ಬೀರಪ್ಪ ಬಂಡಿ, ಜಿಲ್ಲಾಧಿಕಾರಿ ಎಸ್. ಶಂಕರನಾರಾಯಣ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೀರಣ್ಣ ತುರಮರಿ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಟಿ. ರುದ್ರಗೌಡ, ಡಿವೈಎಸ್‌ಪಿ ಸುರೇಶ ಮಸೂತಿ, ಪಂಚಾಯ್ತಿ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry