ಧಾರವಾಡ: ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿಯಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸದಂತೆ ಇಲ್ಲಿನ ಹೈಕೋರ್ಟ್ ಸಂಚಾರಿ ಪೀಠವು ಬುಧವಾರ ತಡೆಯಾಜ್ಞೆ ನೀಡಿದೆ. ನ.1ರಂದು ಈ ಕಾರ್ಯಕ್ರಮ ನಡೆಯಬೇಕಿತ್ತು.

ಈ ಸಂಬಂಧ ಹಗರಿಬೊಮ್ಮನಹಳ್ಳಿ ಮೂಲದ ಮಲ್ಲೇಶ್ವರಂ ಸೊಸೈಟಿಯು ಹೈಕೋರ್ಟ್ನಲ್ಲಿ ರಿಟ್ ಸಲ್ಲಿಸಿತ್ತು.
ಉದ್ದೇಶಿತ ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ ಗುರುತಿಸಿರುವ ಜಮೀನು ತಮಗೆ ಸೇರಿದ್ದು, ಸರ್ಕಾರವು ನ್ಯಾಯಸಮ್ಮತ ರೀತಿಯಲ್ಲಿ ಇದನ್ನು ವಶಪಡಿಸಿಕೊಂಡಿಲ್ಲ ಎಂದು ದೂರಿ ಸೊಸೈಟಿಯು ಜಿಲ್ಲಾಡಳಿತ, ಕಂದಾಯ ಇಲಾಖೆ ವಿರುದ್ಧ ನ್ಯಾಯಾಲಯದಲ್ಲಿ ದೂರು ಸಲ್ಲಿಸಿತ್ತು.

ನ್ಯಾಯಮೂರ್ತಿ ರಾಮ್ಮೋಹನ್ ರೆಡ್ಡಿ ಈ ಆದೇಶ ಹೊರಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.