ಸೋಮವಾರ, ಮೇ 17, 2021
25 °C

ಮಿಸ್ಟರ್ ಇಂಡಿಯಾ ಚಾಂಪಿಯನ್‌ಶಿಪ್ ಇಂದಿನಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಮಿಸ್ಟರ್ ಇಂಡಿಯಾ ಹಿರಿಯರ ರಾಷ್ಟ್ರೀಯ ದೇಹದಾರ್ಢ್ಯ ಚಾಂಪಿಯನ್‌ಶಿಪ್ ಹಾಗೂ ಮಿಸ್ ಇಂಡಿಯಾ ಫಿಟ್‌ನೆಸ್ ರಾಷ್ಟ್ರೀಯ ಚಾಂಪಿಯನ್‌ಶಿಪ್ ನಗರದ ನೆಹರು ಕ್ರೀಡಾಂಗಣದಲ್ಲಿ ಏಪ್ರಿಲ್ 21 ಮತ್ತು 22 ರಂದು ನಡೆಯಲಿದೆ.ಚಾಂಪಿಯನ್‌ಶಿಪ್‌ಗಾಗಿ ನಗರದ ನೆಹರು ಕ್ರೀಡಾಂಗಣದಲ್ಲಿ ಈಗಾಗಲೇ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸ್ಪರ್ಧಾಳುಗಳು ಪ್ರತಿಭೆ ಪ್ರಸ್ತುತಪಡಿಸುವುದಕ್ಕಾಗಿ ವೇದಿಕೆ ಸಿದ್ಧಪಡಿಸಲಾಗಿದೆ. ಸಾವಿರಾರು ಕುರ್ಚಿಗಳನ್ನು ಹಾಕಲಾಗಿದೆ.ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ಈಗಾಗಲೇ ನೂರಾರು ಸ್ಫರ್ಧಾಳುಗಳು ನಗರಕ್ಕೆ ಆಗಮಿಸಿದ್ದಾರೆ. ವಿಲಾಸಪುರ ಸಮೀಪ ಇರುವ ಜಂಗಲ್ ರೆಸಾರ್ಟ್, ನಗರದ ವಿವಿಧ ಲಾಡ್ಜ್‌ಗಳಲ್ಲಿ ಅವರಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ.ಏಪ್ರಿಲ್ 21 ರಂದು ಸಾಯಂಕಾಲ 4 ಗಂಟೆಗೆ ಮುಖ್ಯಮಂತ್ರಿ ಸದಾನಂದಗೌಡ ಅವರು ಚಾಂಪಿಯನ್‌ಶಿಪ್‌ಗೆ ಚಾಲನೆ ನೀಡಿದ್ದಾರೆ. ಕರ್ನಾಟಕ ಸ್ಟೇಟ್ ಬಾಡಿ ಬಿಲ್ಡಿಂಗ್ ಆ್ಯಂಡ್ ಫಿಟ್‌ನೆಸ್ ಅಸೋಸಿಯೇಷನ್ ಮುಖ್ಯಸ್ಥ ಎಂ.ಆರ್. ಸೀತಾರಾಂ ಅಧ್ಯಕ್ಷತೆ ವಹಿಸಲಿದ್ದಾರೆ. ನೈಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಶೋಕ ಖೇಣಿ ಜ್ಯೋತಿ ಪ್ರಜ್ವಲಿಸಲಿದ್ದಾರೆ.ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ದೇಶದ 29 ರಾಜ್ಯಗಳ 450 ರಿಂದ 500 ಕ್ರೀಡಾಪಟುಗಳ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಒಟ್ಟು ಹತ್ತು ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.