ಮೀನುಗಾರಿಕೆ ಗುತ್ತಿಗೆ ವಿಸ್ತರಣೆ
ರಾಯಚೂರು: ರಾಜ್ಯದಲ್ಲಿ ಈ ಬಾರಿ ಬರಗಾಲದ ಪರಿಸ್ಥಿತಿ ಹಿನ್ನೆಲೆಯಲ್ಲಿ ಒಳನಾಡು ಮೀನುಗಾರಿಕೆ ಗುತ್ತಿಗೆ ಅವಧಿಯನ್ನು ಒಂದು ವರ್ಷಕ್ಕೆ ವಿಸ್ತರಿಸಲಾಗಿದೆ. ಕೆರೆಯಲ್ಲಿ ನೀರಿಲ್ಲದೇ ಮೀನುಗಾರಿಕೆ ಸ್ಥಗಿತಗೊಂಡಿದೆ. ಹೀಗಾಗಿ ಗುತ್ತಿಗೆ ಅವಧಿ ವಿಸ್ತರಿಸಲಾಗಿದೆ ಎಂದು ರಾಜ್ಯ ಮೀನುಗಾರಿಕೆ ಸಚಿವ ಆನಂದ ಅಸ್ನೋಟಿಕರ್ ಹೇಳಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೀನುಗಾರಿಕೆ ನಡೆಸಲು ಸೂಕ್ತವಾದ ಒಟ್ಟು 22 ಸಾವಿರ ಕೆರೆಗಳಿವೆ. 6 ಸಾವಿರ ಕೆರೆಗಳನ್ನು ಮೀನುಗಾರಿಕೆಗೆ ಗುತ್ತಿಗೆ ಕೊಡಲಾಗಿದೆ. ಗುತ್ತಿಗೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದರು. ರಾಜ್ಯದಲ್ಲಿ ಹೊಸದಾಗಿ 20 ಕಡೆ ಮೀನು ಮಾರುಕಟ್ಟೆ ನಿರ್ಮಿಸಲು ಸರ್ಕಾರ ಚಿಂತಿಸುತ್ತಿದೆ ಎಂದು ತಿಳಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.