ಮೀಸಲಾತಿ ಆಯ್ಕೆ: ಕನ್ನಡ ಮಾಹಿತಿಗೆ ಆಗ್ರಹ

7

ಮೀಸಲಾತಿ ಆಯ್ಕೆ: ಕನ್ನಡ ಮಾಹಿತಿಗೆ ಆಗ್ರಹ

Published:
Updated:

ಗಂಗಾವತಿ: ತಾಲ್ಲೂಕಿನ 38 ಗ್ರಾಮ ಪಂಚಾಯಿತಿಗಳಿಗೆ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯ ಸಂದರ್ಭದಲ್ಲಿ ಕೇವಲ ಇಂಗ್ಲಿಷ್ ಮಾಹಿತಿ ನೀಡಲಾಗುತ್ತಿದೆ. ಕನ್ನಡದಲ್ಲಿ ಪೂರ್ಣ ಮಾಹಿತಿ ನೀಡುವಂತೆ ಗ್ರಾಮ ಪಂಚಾಯಿತಿ ಸದಸ್ಯರು ಒತ್ತಾಯಿಸಿದ ಘಟನೆ ಮಂಗಳವಾರ ನಡೆಯಿತು.ಕನಕಗಿರಿ ರಸ್ತೆಯಲ್ಲಿರುವ ತಾಲ್ಲೂಕು ಕ್ರೀಡಾಂಗಣದ ಸಮೀಪದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಮುದಾಯ ಭವನದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.ತಂತ್ರಾಂಶ (ಸಾಫ್ಟ್‌ವೇರ್) ಇಂಗ್ಲಿಷ್ ಭಾಷೆಯಲ್ಲಿರುವುದರಿಂದ ಅದೇ ಮಾದರಿಯಲ್ಲಿ ಮಾಹಿತಿ ಸಿದ್ದಗೊಳಿಸಲಾಗಿದೆ. ತಾಂತ್ರಿಕ ಸಮಸ್ಯೆಯಿಂದ ಈ ಬಾರಿ ಸಾಧ್ಯವಾಗದ್ದರಿಂದ ಮುಂದಿನ ಅವಧಿಯ ಮೀಸಲಾತಿ ಆಯ್ಕೆ ಸಂದರ್ಭದಲ್ಲಿ ಕನ್ನಡದಲ್ಲಿ ಮಾಹಿತಿ ನೀಡಲು ಯತ್ನ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಗ್ರಾಮ ಪಂಚಾಯಿತಿ ಸದಸ್ಯರಿಗೆ ಭರವಸೆ ನೀಡಿದರು.ತಾಲ್ಲೂಕಿನ 38 ಗ್ರಾಮ ಪಂಚಾಯಿತಿಗಳ ಸುಮಾರು 540 ಸದಸ್ಯರ ಪೈಕಿ 430ಕ್ಕೂ ಹೆಚ್ಚು ಸದಸ್ಯರು ಸಭೆಗೆ ಆಗಮಿಸಿದ್ದರು. ಆದರೆ ಸೂಕ್ತ ಆಸನ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡದ್ದರಿಂದ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry