ಮೀಸಲಾತಿ: ಸರ್ವಪಕ್ಷಗಳ ಸಭೆ ಮುಂದೂಡಿಕೆ

7

ಮೀಸಲಾತಿ: ಸರ್ವಪಕ್ಷಗಳ ಸಭೆ ಮುಂದೂಡಿಕೆ

Published:
Updated:

ನವದೆಹಲಿ (ಐಎಎನ್‌ಎಸ್): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವ ಕುರಿತು ಪ್ರಧಾನ ಮಂತ್ರಿಗಳ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಬೇಕಿದ್ದ ಸರ್ವಪಕ್ಷಗಳ ಸಭೆಯನ್ನು ಜೂನ್ ಮೊದಲ ವಾರಕ್ಕೆ ಮುಂದೂಡಲಾಗಿದೆ.ಪ್ರಧಾನಿ ಈ ತಿಂಗಳ 26ರಿಂದ 28ರವರೆಗಿನ ಮ್ಯಾನ್ಮಾರ್ ಪ್ರವಾಸದಿಂದ ವಾಪಸಾದ ನಂತರ ಈ ಸಭೆಯ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.ಉತ್ತರ ಪ್ರದೇಶದಲ್ಲಿದ್ದ ಮಾಯಾವತಿ  ಸರ್ಕಾರ ಎಸ್‌ಸಿ/ ಎಸ್‌ಟಿಯವರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡಬೇಕು ಎಂದು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮೀಸಲಾತಿಯನ್ನು ರದ್ದುಗೊಳಿಸಲು ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಚರ್ಚಿಸಲು ಪ್ರಧಾನಿ ನೇತೃತ್ವದಲ್ಲಿ ಬುಧವಾರ ಸರ್ವಪಕ್ಷಗಳ ಸಭೆ ಕರೆಯಲಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry