ಮುಂಗಾರು ದುರ್ಬಲ

7

ಮುಂಗಾರು ದುರ್ಬಲ

Published:
Updated:

ಬೆಂಗಳೂರು: ಶನಿವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಕರಾವಳಿ ಮತ್ತು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂಗಾರು ದುರ್ಬಲವಾಗಿದೆ. ಉತ್ತರ ಒಳನಾಡಿನಲ್ಲಿ ಹಲವೆಡೆ  ಮಳೆಯಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ.ಅಂಕೋಲಾದಲ್ಲಿ ಅತಿ ಹೆಚ್ಚು 8 ಸೆಂ.ಮೀ ಮಳೆಯಾಗಿದೆ. ಔರಾದ್, ಮಂಠಾಳ, ಶಹಾಪುರ 5, ಚಿತ್ತಾಪುರ 4, ಹುಮನಾಬಾದ್ 3, ಅಥಣಿ, ಬಬಲೇಶ್ವರ, ದೇವರಹಿಪ್ಪರಗಿ, ರಾಯಚೂರು 2, ಕಾರವಾರ, ಹುಬ್ಬಳ್ಳಿ, ರಬಕವಿ, ವಿಜಾಪುರ, ಭಾಲ್ಕಿ, ಅಫ್ಜಲ್‌ಪುರ, ಸೈದಾಪುರದಲ್ಲಿ 1 ಸೆಂ.ಮೀ ಮಳೆಯಾಗಿದೆ. ಚಾಮರಾಜನಗರದಲ್ಲಿ ಗರಿಷ್ಠ ಉಷ್ಣಾಂಶ 34.1 ಮತ್ತು ದಾವಣಗೆರೆಯಲ್ಲಿ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದ ಉತ್ತರ ಒಳನಾಡಿನ ಹಲವೆಡೆ ಮತ್ತು ಕರಾವಳಿ ಕೆಲವು ಪ್ರದೇಶಗಳು ಹಾಗೂ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ..

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry