ಸೋಮವಾರ, ಮೇ 17, 2021
31 °C

ಮುಂಗಾರು ವಿಳಂಬ: ನೀರಿಗೆ ಪರದಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಫಜಲಪುರ: ತಾಲ್ಲೂಕಿನ ಮಾಶಾಳ ಗ್ರಾಮದಲ್ಲಿರುವ ಕುಡಿಯುವ ನೀರಿನ ತೆರೆದ ಬಾವಿ ಮತ್ತು ಕೊಳವೆ ಬಾವಿಗಳು ಬತ್ತಿವೆ. ಮುಂಗಾರು ಮಳೆ ಆರಂಭವಾಗಿ ತಿಂಗಳು ಕಳೆಯುತ್ತ ಬಂದರೂ ಮಳೆ ಬಾರದಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ.ಗ್ರಾಮಸ್ಥರು ಕರಜಗಿ ರಸ್ತೆಯಲ್ಲಿರುವ ಆಳಂದ ಮಠದಲ್ಲಿರುವ ಕೊಳವೆ ಬಾವಿಯಿಂದ 2 ಕಿ.ಮೀ ದೂರದಿಂದ ನೀರು ತರುತ್ತಿದ್ದಾರೆ. ನೀರಿಗಾಗಿ ಜನರು ನೀರಿಗಾಗಿ ದಿನಗಟ್ಟಲೆ ಕಾಯಬೇಕಾಗಿದೆ.  ಅನಿಯಮಿತ ವಿದ್ಯುತ್ ಪೂರೈಕೆಯಿಂದ ಅಲ್ಪಸ್ವಲ್ಪ ನೀರಿರುವ ಕೊಳವೆ ಬಾವಿಯಿಂದ ನೀರನ್ನು ಪಡೆಯಲಾಗುತ್ತಿಲ್ಲ ಹೀಗಾಗಿ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.ಮಾಶಾಳ ಗ್ರಾಮದಲ್ಲಿ ಸರ್ಕಾರ 30ಕ್ಕೂ ಹೆಚ್ಚು ಕೊಳವೆ ಬಾವಿಗಳನ್ನು ಕೊರೆದಿದೆ. ಯಾವ ಕೊಳವೆ ಬಾವಿಯಿಂದಲೂ ಸರಿಯಾಗಿ ನೀರು ಬರುತ್ತಿಲ್ಲ ಒಂದು ಗಂಟೆ ನಡೆದರೆ ನೀರು ಖಾಲಿಯಾಗುತ್ತವೆ ಎಂದು ಗ್ರಾಮಸ್ಥರು ಹೇಳುತ್ತಾರೆ.ಸಂಬಂಧಿಸಿದ ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳು ಇತ್ತ ಗಮನ ಹರಿಸಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.