ಸೋಮವಾರ, ಏಪ್ರಿಲ್ 19, 2021
31 °C
ಎಟಿಎಂ ವಾಹನ ದರೋಡೆ ಪ್ರಕರಣಗಳು

ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಎಟಿಎಂ ಘಟಕಗಳಿಗೆ ಹಣ ತುಂಬುವ ವಾಹನಗಳನ್ನು ತಡೆದು ದರೋಡೆ ಮಾಡುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರ ಪೊಲೀಸರು ಸೆಕ್ಯುರಿಟಿ ಏಜೆನ್ಸಿಗಳ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿ, ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.ಸುಮಾರು 20 ಸೆಕ್ಯುರಿಟಿ ಏಜೆನ್ಸಿಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಎಟಿಎಂ ಘಟಕಗಳಿಗೆ ಹಣ ತುಂಬಲು ಬಳಸುವ ವಾಹನಗಳ ಸುರಕ್ಷತೆಯ ಬಗ್ಗೆ, ಏಜೆನ್ಸಿಗಳು ನೇಮಿಸಿಕೊಳ್ಳುವ ಸಿಬ್ಬಂದಿಯ ಬಗ್ಗೆ ಹೆಚ್ಚು ಗಮನ ನೀಡಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದ ಏಜೆನ್ಸಿಗಳ ಅಧಿಕಾರಿಗಳಿಗೆ ತಿಳಿಸಲಾಗಿದೆ.`ದರೋಡೆಗಳನ್ನು ತಡೆಯಲು ಏಜೆನ್ಸಿಗಳು ಜಾಲರಿಯುಳ್ಳ ವಾಹನಗಳನ್ನು ಬಳಸಬೇಕು. ಈ ವಾಹನಗಳು ಕಡ್ಡಾಯವಾಗಿ ಬಂದೂಕುದಾರಿಯೊಬ್ಬರನ್ನು ಹೊಂದಿರಬೇಕು. ಭದ್ರತಾ ಸಿಬ್ಬಂದಿಯನ್ನು ನೇಮಿಸಿಕೊಳ್ಳುವ ಸಂದರ್ಭದಲ್ಲಿ ಏಜೆನ್ಸಿಗಳು ಅವರ ಸಂಪೂರ್ಣ ಮಾಹಿತಿಯನ್ನು ಪಡೆಯಬೇಕು' ಎಂದು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಟಿ.ಸುನಿಲ್ ಕುಮಾರ್ ಹೇಳಿದರು.`ಮುಂದಿನ ದಿನಗಳಲ್ಲಿ ಭದ್ರತಾ ವೈಫಲ್ಯದಿಂದ ದರೋಡೆಗಳು ನಡೆದರೆ ಅದಕ್ಕೆ ಸೆಕ್ಯುರಿಟಿ ಏಜೆನ್ಸಿಗಳೇ ಹೊಣೆಯಾಗಬೇಕಾಗುತ್ತದೆ' ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.