ಮುಂಜಾಗ್ರತಾ ಕ್ರಮ: 33 ಜನರ ಬಂಧನ

7
ಗಣೇಶ ವಿಸರ್ಜನೆ: ಬಿಎಸ್‌ಎಫ್ ಯೋಧರ ಪಥಸಂಚಲನ

ಮುಂಜಾಗ್ರತಾ ಕ್ರಮ: 33 ಜನರ ಬಂಧನ

Published:
Updated:

ಬೆಳಗಾವಿ: ಇದೇ ಬುಧವಾರ (ಸೆ. 18) ಗಣೇಶ ವಿಸರ್ಜನಾ ಮೆರವಣಿಗೆ ಅತ್ಯಂತ ವಿಜೃಂಭಣೆಯಿಂದ ನಡೆಯ ಲಿದ್ದು, ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರಲ್ಲಿ ವಿಶ್ವಾಸವನ್ನು ಮೂಡಿಸುವ ಸಲುವಾಗಿ ನಗರದ ಸೂಕ್ಷ್ಮ ಸ್ಥಳಗಳಲ್ಲಿ ಬಿಎಸ್ಎಫ್, ಕೆಎಸ್ಆರ್‌ಪಿ ಮತ್ತು ಡಿಎಆರ್ ಸಿಬ್ಬಂದಿಯಿಂದ ಸೋಮವಾರ ಪಥಸಂಚಲನ ನಡೆಯಿತು.ನಗರದ ಚನ್ನಮ್ಮ ವೃತ್ತದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಚಂದ್ರ ಗುಪ್ತ ಪಥಸಂಚಲನಕ್ಕೆ ಚಾಲನೆ ನೀಡಿ, ಗಣೇಶ ವಿಸರ್ಜನೆ ಕಾರ್ಯಕ್ರಮವನ್ನು ಶಾಂತರೀತಿಯಿಂದ ನಡೆಸಲು ಎಲ್ಲ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಗರಕ್ಕೆ ಆಗಮಿಸಿದ ಬಿಎಸ್ಎಫ್ ಸಿಬ್ಬಂದಿ ಜೊತೆಗೆ ಕೆಎಸ್ಆರ್‌ಪಿ ಮತ್ತು ಡಿಎಆರ್ ಸಿಬ್ಬಂದಿ  ನಗರದ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸ್ಥಳಗಳಲ್ಲಿ ಪಥಸಂಚಲನ ನಡೆಸಿ ದ್ದಾರೆ. ಸಾರ್ವಜನಿಕರು ಮುಕ್ತವಾಗಿ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು ಎಂದು ಹೇಳಿದರು.ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆ ಸಂಭ ವಿಸದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ ನಗರದಲ್ಲಿ ಈವೆರೆಗೆ ಅಪರಾಧ ಹಿನ್ನೆಲೆಯುಳ್ಳ ಒಟ್ಟು 33 ಜನರನ್ನು ಬಂಧಿಸಿ ಒಂದು ವಾರ ಕಾಲ ನ್ಯಾಯಾಂಗ ವಶಕ್ಕೆ ಒಪ್ಪಿಸ ಲಾಗಿದೆ. ಗಣೇಶ ವಿಸರ್ಜನೆ ಕಾರ್ಯ ಕ್ರಮದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಮಾಜ ಘಾತುಕ ಶಕ್ತಿಗಳ ಮೇಲೆ ಪೊಲೀಸ್ ಇಲಾಖೆ ನಿಗಾ ಇಟ್ಟಿದ್ದು, ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಚಟುವಟಿಕೆಗಳ ಮೇಲೆ ಸಂಪೂರ್ಣ ನಿಗಾವಹಿಸಲಾಗಿದೆ.ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ವ್ಯಕ್ತಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುತ್ತಿದೆ. ಅಗತ್ಯಬಿದ್ದರೆ ಮುಂಜಾಗ್ರತ ಕ್ರಮವಾಗಿ ಬಂಧಿಸುವವರ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಎಸ್ಪಿ ಡಾ. ಚಂದ್ರಗುಪ್ತ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry