ಬುಧವಾರ, ಮೇ 18, 2022
21 °C

ಮುಂದಿನ ತಿಂಗಳು ಭಾರತಕ್ಕೆ ಸಾರಾ ಪಾಲಿನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್ (ಪಿಟಿಐ): ಅಮೆರಿಕದ ಅಲಸ್ಕಾ ನಗರದ ಮಾಜಿ ಗವರ್ನರ್ ಮತ್ತು ರಿಪಬ್ಲಿಕನ್ ಪಕ್ಷದ ನಾಯಕಿ ಸಾರಾ ಪಾಲಿನ್ ಅವರು ಮುಂದಿನ ತಿಂಗಳು ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ರಾಜಧಾನಿ ನವದೆಹಲಿಯಲ್ಲಿ  ಮಾರ್ಚ್ 19 ರಂದು ನಡೆಯಲಿರುವ ಇಂಡಿಯಾ ಟುಡೆ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಇದು ಅವರ ಭಾರತದ ಮೊದಲ ಭೇಟಿಯಾಗಿದೆ. ಪ್ರಧಾನಿ ಮನಮೋಹನ್ ಸಿಂಗ್ ಪಾಲ್ಗೊಳ್ಳುವ ಔತಣಕೂಟದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿರುವ ಪಾಲಿನ್, ‘ನನ್ನ ದೃಷ್ಟಿಕೋನದಲ್ಲಿ ಅಮೆರಿಕ’ ಎಂಬ ವಿಷಯದ ಕುರಿತು ಪ್ರಧಾನ ಭಾಷಣ ಮಾಡಲಿದ್ದಾರೆ ಎಂಬ ವಿಷಯವನ್ನು ಅವರ ಸಲಹೆಗಾರ ರೆಬೆಕ್ಕಾ ಅವರು ಟ್ವೀಟರ್‌ನಲ್ಲಿ ತಿಳಿಸಿದ್ದಾರೆ. 2008ರಲ್ಲಿ ಅಮೆರಿಕ ಉಪಾಧ್ಯಕ್ಷ ಹುದ್ದೆಗೆ ನಡೆದ ಚುನಾವಣೆಯಲ್ಲಿ ಅವರು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಸೋಲುಂಡಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.