ಶುಕ್ರವಾರ, ಏಪ್ರಿಲ್ 23, 2021
31 °C

ಮುಂದುವರಿದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಸರ್ಕಾರಿ ಸ್ವಾಮ್ಯದ ಜೀವವಿಮಾ ಸಂಸ್ಥೆ (ಎಲ್‌ಐಸಿ) ವತಿಯಿಂದ ನಿವೃತ್ತಿ ವೇತನ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಸಿಐಟಿಯು ಅಂಗನವಾಡಿ ನೌಕರರ ಸಂಘದ ಸದಸ್ಯರು ಕೈಗೊಂಡಿರುವ ಅನಿರ್ದಿಷ್ಟ ಅವಧಿಯ ಪ್ರತಿಭಟನೆ ಬುಧವಾರ ಮೂರನೇ ದಿನಕ್ಕೆ ಕಾಲಿರಿಸಿತು.ಪ್ರತಿಭಟನಾ ಸ್ಥಳಕ್ಕೆ ಬುಧವಾರ ಭೇಟಿ ನೀಡಿದ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಮಾತನಾಡಿ, ‘ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಒಂದಿಲ್ಲೊಂದು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸಮಸ್ಯೆಗಳನ್ನು ಬಗೆಹರಿಸಬೇಕಾದ ಸರ್ಕಾರ ಅವರತ್ತ ನಿರ್ಲಕ್ಷ್ಯ ತೋರುತ್ತಿದೆ’ ಎಂದು ಆರೋಪಿಸಿದರು.

 

‘ಅಂಗನವಾಡಿ ನೌಕರರು ಎಲ್‌ಐಸಿ ಮೂಲಕ ನಿವೃತ್ತಿ ವೇತನ ಒದಗಿಸುವಂತೆ ಕೇಳುತ್ತಿದ್ದಾರೆ ಹೊರತು ಅಸಾಧ್ಯವಾದುದ್ದನ್ನು ಕೇಳುತ್ತಿಲ್ಲ. ಸರ್ಕಾರದ ಅಧೀನದಲ್ಲೇ ಇರುವ ಎಲ್‌ಐಸಿ ಸಂಸ್ಥೆಯ ಮೂಲಕ ನಿವೃತ್ತಿ ವೇತನ ನೀಡಲು ಸರ್ಕಾರಕ್ಕೇನು ಕಷ್ಟ ಎಂದು ಪ್ರಶ್ನಿಸಿದರು.ಅಂಗನವಾಡಿ ನೌಕರರ ಹೋರಾಟ ರಾಜ್ಯದಾದ್ಯಂತ ನಡೆಯುತ್ತಿದ್ದು, ಅವರ ಸಮಸ್ಯೆಗಳನ್ನು ಆಲಿಸಲು ಸರ್ಕಾರ ಮುಂದಾಗಬೇಕು. ಅತಿ ಕಡಿಮೆ ಗೌರವ ಧನದಲ್ಲಿ ಹೆಚ್ಚಿನ ಕೆಲಸ ಮಾಡುವ ಅಂಗನವಾಡಿ ನೌಕರರಿಗೆ ಸರ್ಕಾರ ನ್ಯಾಯ ಒದಗಿಸಬೇಕು ಎಂದು ಅವರು ಆಗ್ರಹಿಸಿದರು.

ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಲಕ್ಷ್ಮಿದೇವಮ್ಮ, ಸಿಐಟಿಯು ಮುಖಂಡ ಬಿ.ಎನ್.ಮುನಿಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.