ಬುಧವಾರ, ಮೇ 18, 2022
26 °C

ಮುಂದುವರೆದ ಜಗನ್ ನ್ಯಾಯಾಂಗ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್, (ಪಿಟಿಐ): ಅಕ್ರಮ ಆಸ್ತಿ ಪ್ರಕರಣದ ಆರೋಪದ ಮೇರೆಗೆ ನ್ಯಾಯಾಂಗ ಬಂಧನದಲ್ಲಿರುವ ಕಡಪ ಸಂಸದ, ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ ಜಗನ್ ಮೋಹನ್ ರೆಡ್ಡಿ ಅವರ ಬಂಧನದ ಅವಧಿಯನ್ನು ಸ್ಥಳೀಯ ಸಿಬಿಐ ವಿಶೇಷ ನ್ಯಾಯಾಲಯವು ಜುಲೈ 4ರವರೆಗೆ ವಿಸ್ತರಿಸಿದೆ.

ಇಲ್ಲಿನ ಚಂಚಲಗೂಡ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಜಗನ್ ಅವರನ್ನು ಸಿಬಿಐ ನ್ಯಾಯಾಲಯದ ನ್ಯಾಯಾಧೀಶರು ವಿಡಿಯೋ ಕಾನ್ಫರೇನ್ಸ್ ಮೂಲಕ ವಿಚಾರಣೆ ನಡೆಸಿ, ಬಂಧನದ ಅವಧಿಯನ್ನು ವಿಸ್ತರಿಸಿದರು.



ಈ ಹಿಂದೆ ಜಗನ್ ಅವರು ನೇರವಾಗಿ ನ್ಯಾಯಾಲಯಕ್ಕೆ ಹಾಜರಾಗುವುದಾಗಿ  ನ್ಯಾಯಾಧೀಶರಲ್ಲಿ ಮನವಿ ಮಾಡಿಕೊಂಡಿದ್ದರು. ಮನವಿಯನ್ನು ತಿರಸ್ಕರಿಸಿದ ನ್ಯಾಯಾಧೀಶರು ವಿಡಿಯೋ ಕಾನ್ಫರೇನ್ಸ್ ಮೂಲಕವೇ ವಿಚಾರಣೆ ನಡೆಸಲು ವ್ಯವಸ್ಥೆ ಕಲ್ಪಿಸುವಂತೆ ಕಾರಾಗೃಹದ ಪ್ರಾಧಿಕಾರಕ್ಕೆ  ನಿರ್ದೇಶಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.