ಭಾನುವಾರ, ಏಪ್ರಿಲ್ 11, 2021
22 °C

ಮುಂದೆ ನ್ಯಾಯಾಧೀಶರಿಗೂ ಹೆಲ್ಮೆಟ್!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಭವಿಷ್ಯದಲ್ಲಿ ನ್ಯಾಯಾಧೀಶರು ತಮ್ಮ ರಕ್ಷಣೆಗಾಗಿ ನ್ಯಾಯಾಲಯಕ್ಕೆ ಹೆಲ್ಮೆಟ್ ಧರಿಸಿಕೊಂಡು ಹಾಜರಾಗುವ ಪ್ರಸಂಗ ಎದುರಾಗಬಹುದು.

-ಹೀಗೆ ಹೇಳಿದ್ದು ಸುಪ್ರೀಂಕೋರ್ಟ್.ಪ್ರತ್ಯೇಕ ತೆಲಂಗಾಣ ರಾಜ್ಯಕ್ಕೆ ಒತ್ತಾಯಿಸಿ ಈಚೆಗೆ ಆಂಧ್ರ ಪ್ರದೇಶ ಹೈಕೋರ್ಟ್ ಮತ್ತು ಇತರ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಹಿಂಸಾಚಾರ ನಡೆದಿರುವ ಕುರಿತು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಯ ವಿಚಾರಣೆ ಕೈಗೆತ್ತಿಕೊಂಡಿರುವ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಜಿ.ಎಸ್. ಸಿಂಘ್ವಿ ಮತ್ತು ಎಸ್.ಜೆ. ಮುಖ್ಯೋಪಾಧ್ಯಾಯ ಮೇಲಿನಂತೆ ಹೇಳಿದ್ದಾರೆ. ಇದೇ ವೇಳೆ ಅರ್ಜಿಯ ವಿಚಾರಣೆಯನ್ನು ಎರಡು ವಾರ ಮುಂದೂಡಿದ್ದಾರೆ.`ಕೆಲ ವರ್ಷಗಳ ಹಿಂದೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಾಮೀನು ನಿರಾಕರಿಸಿದ ಮ್ಯಾಜಿಸ್ಟ್ರೇಟ್‌ರ ಮೇಲೆ ನ್ಯಾಯಾಲಯದ ಆವರಣದಲ್ಲಿಯೇ ವಕೀಲರೊಬ್ಬರು ಹಲ್ಲೆ ನಡೆಸಿದ್ದರು. ಆದ ಕಾರಣ ನ್ಯಾಯಾಧೀಶರು ಕೋರ್ಟ್‌ಗೆ ಹೆಲ್ಮೆಟ್ ಧರಿಸಿಕೊಂಡು ಬರಬೇಕಾಗುತ್ತದೆ~ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ.ಹಿಂಸಾಚಾರದಲ್ಲಿ ತೊಡಗುವ ವಕೀಲರ ಪರವಾನಗಿಯನ್ನು ರದ್ದುಪಡಿಸಬೇಕೆ ಅಥವಾ ಇಲ್ಲವೇ ಎನ್ನುವುದರ ಬಗ್ಗೆ ಚಿಂತಿಸಲಾಗುವುದು ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.`ಅಲಹಾಬಾದ್, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಈಗಾಗಲೇ ವಕೀಲರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಹಿಂಸಾಚಾರದಲ್ಲಿ ತೊಡಗುವ ವಕೀಲರ ಪರವಾನಗಿಯನ್ನು ಈ ನ್ಯಾಯಾಲಯದಲ್ಲಿ ರದ್ದುಪಡಿಸುವುದು ಸೂಕ್ತವೇ? ಎಂದು ನ್ಯಾಯಮೂರ್ತಿಗಳು ಹಿರಿಯ ವಕೀಲ ಆರ್. ವೆಂಕಟರಮಣಿ ಅವರನ್ನು ಕೇಳಿದ್ದಾರೆ.ಸಾರ್ವಜನಿಕರ ಹಕ್ಕುಗಳಿಗಾಗಿ ಹೋರಾಡುವವರು ಇಂತಹ ಘಟನೆಗಳಲ್ಲಿ ತೊಡಗುತ್ತಿರುವದು ದುರದೃಷ್ಟಕರ ಸಂಗತಿ ಎಂದು ಕೋರ್ಟ್ ಹೇಳಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.