ಮಂಗಳವಾರ, ಅಕ್ಟೋಬರ್ 15, 2019
26 °C

ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಶಸ್ತ್ರಚಿಕಿತ್ಸೆಗೆ ನೆರವು

Published:
Updated:

ಬೆಂಗಳೂರು: ಅಮರನಾಥ ಎಂಬ ಬಾಲಕನ ಮೂತ್ರಪಿಂಡದ ಶಸ್ತ್ರಚಿಕಿತ್ಸೆಯ ವೆಚ್ಚವನ್ನು ಡಿ.ವಿ. ಸದಾನಂದ ಗೌಡ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೀಡಲಿದ್ದಾರೆ.ಹುಬ್ಬಳ್ಳಿ ಮೂಲದ ಬಾಲಕ ಅಮರನಾಥನ ಮೂತ್ರಪಿಂಡಗಳು ವಿಫಲಗೊಂಡಿವೆ. ಈ ಹಿನ್ನೆಲೆಯಲ್ಲಿ ಆತನ ತಾಯಿ ತನ್ನ ಒಂದು ಮೂತ್ರಪಿಂಡವನ್ನು ಅಮರನಾಥನಿಗೆ ನೀಡಲು ಮುಂದಾಗಿದ್ದರು. ಆದರೆ ಬಡ ಕುಟುಂಬದ ಅವರಿಗೆ ಮೂತ್ರಪಿಂಡ ಬದಲಿಸುವ ಶಸ್ತ್ರಚಿಕಿತ್ಸೆಗೆ ಬೇಕಾದ ಹಣ ಹೊಂದಿಸುವ ಸಾಮರ್ಥ್ಯ ಇರಲಿಲ್ಲ.ಈ ವಿಷಯ ತಿಳಿದ ಸದಾನಂದ ಗೌಡರು ಶಸ್ತ್ರಚಿಕಿತ್ಸೆಯ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಭರಿಸುವುದಾಗಿ ತಿಳಿಸಿದ್ದಾರೆ.

Post Comments (+)