ಶುಕ್ರವಾರ, ಮೇ 14, 2021
25 °C

ಮುಖ್ಯಮಂತ್ರಿ ದೆಹಲಿಗೆ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆಂತರಿಕ ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿಯವರು ಬುಧವಾರ ಕರೆದಿರುವ ಮುಖ್ಯಮಂತ್ರಿಗಳ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ರಾತ್ರಿ ದೆಹಲಿಗೆ ತೆರಳುವರು.



ಬುಧವಾರ ಬೆಳಿಗ್ಗೆ ಮುಖ್ಯಮಂತ್ರಿಗಳ ಸಭೆ ನಡೆಯಲಿದೆ. ಮಧ್ಯಾಹ್ನದ ಬಳಿಕ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸಾಗುವರು. ಸದ್ಯದ ಕಾರ್ಯಕ್ರಮ ಪಟ್ಟಿ ಪ್ರಕಾರ, ಮುಖ್ಯಮಂತ್ರಿಯವರು ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡುವ ಯೋಜನೆ ಇಲ್ಲ. ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಪ್ರತ್ಯೇಕವಾಗಿ ಭೇಟಿಮಾಡಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಅಗ್ಗದ ದರದಲ್ಲಿ ಅಕ್ಕಿ ವಿತರಿಸುವ ರಾಜ್ಯ ಸರ್ಕಾರದ ಯೋಜನೆಗೆ ಅಗತ್ಯವಿರುವ ಹೆಚ್ಚುವರಿ ಅಕ್ಕಿಯನ್ನು ಕೇಂದ್ರ ಸರ್ಕಾರದಿಂದ ಕಡಿಮೆ ದರದಲ್ಲಿ ಒದಗಿಸುವಂತೆ ಮನವಿ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.