ಶನಿವಾರ, ಜನವರಿ 25, 2020
28 °C

ಮುಖ್ಯಮಂತ್ರಿ ದೆಹಲಿಗೆ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುವರ್ಣಸೌಧ (ಬೆಳಗಾವಿ): ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ದೆಹಲಿಗೆ ತೆರಳಲಿದ್ದಾರೆ.ಕಬ್ಬು ಬೆಲೆ ನಿಗದಿಗೆ ಸಂಬಂಧಿಸಿ ದಂತೆ ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಶುಕ್ರವಾರ ಕರೆದಿರುವ ಸಭೆಯಲ್ಲಿ ಸಿದ್ದರಾಮಯ್ಯ  ಪಾಲ್ಗೊಳ್ಳುವರು. ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶ ಸೇರಿದಂತೆ ಕಬ್ಬು ಬೆಳೆಯುವ ಇತರ ರಾಜ್ಯಗಳ ಮುಖ್ಯಮಂತ್ರಿಗಳೂ ಈ ಸಭೆಯಲ್ಲಿ ಭಾಗವಹಿಸುವರು.ಗುರುವಾರ ಬೆಂಗಳೂರಿನಲ್ಲಿ ಎರಡು ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿ ಭಾಗವಹಿಸಿ ನಂತರ ದೆಹಲಿಗೆ ತೆರಳುವರು. ಇಲ್ಲಿ ನಡೆಯುತ್ತಿರುವ ಅಧಿವೇಶನ ಶುಕ್ರವಾರ ಪೂರ್ಣಗೊಳ್ಳಲಿದ್ದು ಎರಡು ದಿನ ಮುಖ್ಯಮಂತ್ರಿ ಭಾಗವಹಿಸುವುದಿಲ್ಲ.

ಪ್ರತಿಕ್ರಿಯಿಸಿ (+)