ಮಂಗಳವಾರ, ಮೇ 11, 2021
26 °C

ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಸೇವೆಯಿಂದ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಹುದ್ದೆಯಿಂದ ಆರ್.ಪಿ.ಜಗದೀಶ್ ಅವರನ್ನು ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಜಗದೀಶ್  ಮಾಧ್ಯಮ ಸಲಹೆಗಾರರಾಗಿ ನೇಮಕಗೊಂಡಿದ್ದರು. ಅವರನ್ನು ಈಗ ಸೇವೆಯಿಂದ ಬಿಡುಗಡೆ ಮಾಡಲಾಗಿದೆ.ತಮ್ಮ ರಾಜಕೀಯ ಕಾರ್ಯದರ್ಶಿ ಹಾಗೂ ಮಾಧ್ಯಮ ಸಲಹೆಗಾರ ಹುದ್ದೆಗಳು ತೆರವಾಗಿವೆ. ಈ ಹುದ್ದೆಗಳಿಗೆ ಹತ್ತು ದಿನಗಳಲ್ಲಿ ಹೊಸದಾಗಿ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸದಾನಂದ ಗೌಡ ತಿಳಿಸಿದರು.ವಿಡಿಯೊ ಸಂವಾದ ಕಾರ್ಯಕ್ರಮ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, `ಜಗದೀಶ್ ಅವರು 8-10 ದಿನಗಳಿಂದ ಕಚೇರಿಯಲ್ಲಿ ಲಭ್ಯವಿರಲಿಲ್ಲ. ಅವರ ನೇಮಕಾತಿ ಆದೇಶ ರದ್ದಾಗಿದೆ. ರಾಜಕೀಯ ಕಾರ್ಯದರ್ಶಿ ಆಗಿದ್ದ ಬಿ.ಜೆ.ಪುಟ್ಟಸ್ವಾಮಿ, ಅವರಾಗಿಯೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ~ ಎಂದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.