ಬುಧವಾರ, ಜೂನ್ 16, 2021
28 °C

ಮುಖ್ಯ ಕಾರ್ಯದರ್ಶಿ ಹಾಜರಿಗೆ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಚಿತ್ರದುರ್ಗ ಜಿಲ್ಲೆಗಳಿಗೆ ಮಾತ್ರ ‘ಕಾರ್ಮಿಕರ ಪರಿಹಾರ ಆಯುಕ್ತ’ರನ್ನು ಏಕೆ ನೇಮಕ ಮಾಡಿಲ್ಲ ಎಂಬ ಬಗ್ಗೆ ಖುದ್ದು ಹಾಜರಾಗಿ ವಿವರಣೆ ನೀಡುವಂತೆ ಸರ್ಕಾರ ಮುಖ್ಯ ಕಾರ್ಯದರ್ಶಿಯವರಿಗೆ ಹೈಕೋರ್ಟ್‌ ಬುಧವಾರ ಆದೇಶಿಸಿದೆ.ಐಸಿಐಸಿಐ ಲೊಂಬಾರ್ಡ್‌ ವಿಮಾ ಕಂಪೆನಿ ಸಲ್ಲಿಸಿರುವ ಅರ್ಜಿಯ ವಿಚಾರಣೆ­ಯನ್ನು ನ್ಯಾಯಮೂರ್ತಿ ರಾಮಮೋಹನ ರೆಡ್ಡಿ ಅವರು ವಿಚಾರಣೆ­ಯನ್ನು ಗುರುವಾರಕ್ಕೆ ಮುಂದೂಡಿದ್ದಾರೆ. ನೌಕರರ ಪರಿಹಾರ ಕಾಯ್ದೆಯ ಸೆಕ್ಷನ್‌ 20ರ ಅನ್ವಯ ಎಲ್ಲ ಜಿಲ್ಲೆಗಳಲ್ಲಿ ಆಯುಕ್ತರನ್ನು ನೇಮಕ ಮಾಡಬೇಕು. ಆದರೆ ಈ ಜಿಲ್ಲೆಗಳಿಗೆ ಮಾತ್ರ ನೇಮಕ ಮಾಡಿಲ್ಲ ಎಂದು ಅರ್ಜಿದಾರರ ಪರ ವಕೀಲ ಎ.ಎನ್‌. ಕೃಷ್ಣಸ್ವಾಮಿ ಪೀಠದ ಗಮನಕ್ಕೆ ತಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.