ಮಂಗಳವಾರ, ಜೂನ್ 15, 2021
20 °C

ಮುಖ್ಯ ಚುನಾವಣಾಧಿಕಾರಿ ಉಡುಪಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಿ.ಎಸ್.ಸುರಂಜನ ನೇತೃತ್ವದ ಅಧಿಕಾರಿಗಳ ತಂಡ ಬುಧವಾರ ಉಡುಪಿಗೆ ಭೇಟಿ ನೀಡಲಿದೆ.

ಚುನಾವಣಾ ಸಿದ್ಧತೆ ಬಗ್ಗೆ ಪರಿಶೀಲಿಸಲು ಅಧಿಕಾರಿಗಳು ತೆರಳುತ್ತಿದ್ದು, ಕಣದಲ್ಲಿರುವ ಅಭ್ಯರ್ಥಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜತೆ ಮಾತುಕತೆ ನಡೆಸಲಿದ್ದಾರೆ. ಇದರ ನಂತರ ಚುನಾವಣಾಧಿಕಾರಿಗಳ ಸಭೆ ನಡೆಸಲಿದ್ದಾರೆ. ವಿಶೇಷ ಚುನಾವಣಾಧಿಕಾರಿ ಆರ್.ಮನೋಜ್, ಜಂಟಿ ಮುಖ್ಯ ಚುನಾವಣಾಧಿಕಾರಿ ಶಾಮಯ್ಯ ತೆರಳುತ್ತಿದ್ದು, ಇಡೀ ದಿನ ಚುನಾವಣಾ ಸಿದ್ಧತೆ ಬಗ್ಗೆ ಸಭೆಗಳನ್ನು ನಡೆಸಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.