ಭಾನುವಾರ, ಮೇ 22, 2022
21 °C

ಮುಖ್ಯ ಶಿಕ್ಷಕರಿಗೆ ನೇಮಕಾತಿ ಆದೇಶ ನೀಡಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಆಯ್ಕೆಗೊಂಡಿರುವ 629 ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ಕೂಡಲೇ ನೇಮಕಾತಿ ಆದೇಶ ನೀಡಬೇಕು ಎಂದು ಭಾರತ್ ವಿದ್ಯಾರ್ಥಿ ಕ್ರಿಯಾ ಸಮಿತಿ ಸರ್ಕಾರವನ್ನು ಆಗ್ರಹಿಸಿದೆ.ಆಯ್ಕೆಯಾಗಿರುವ ಅಭ್ಯರ್ಥಿಗಳು ನೇಮಕಾತಿ ಆದೇಶ ನೀಡುವಂತೆ ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ನಡೆಸುತ್ತಿದ್ದರೂ ಸರ್ಕಾರ ಈ ಬಗ್ಗೆ ಸ್ಪಂದಿಸದಿರುವುದು ಸರಿಯಲ್ಲ ಎಂದು ಸಮಿತಿಯ ರಾಜ್ಯಸಂಚಾಲಕ ಸೂರ್ಯ ಮುಕುಂದರಾಜ್, ನಗರ ಸಂಚಾಲಕ ಭರತ್ ಭೂಷಣ್, ಸಹ ಸಂಚಾಲಕ ಸುನಿಲ್ ಕುಮಾರ್ ಹೇಳಿಕೆಯಲ್ಲಿ ಟೀಕಿಸಿದ್ದಾರೆ.ನೇರ ನೇಮಕಾತಿ ಹೊಂದಿರುವ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಗೆಜೆಟ್‌ನಲ್ಲಿ ಪ್ರಕಟಿಸಲಾಗಿದೆ. ಆದರೆ ಇದುವರೆಗೆ ನೇಮಕಾತಿ ಆದೇಶ ನೀಡದೆ ಇರುವುದರಿಂದ ಅಭ್ಯರ್ಥಿಗಳು ಕಂಗಾಲಾಗಿದ್ದಾರೆ. ಸರ್ಕಾರ ಅಭ್ಯರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುವುದು ಸರಿಯಲ್ಲ. ಕಾನೂನು ತೊಡಕುಗಳನ್ನು ನಿವಾರಿಸಿ ಕೂಡಲೇ ನೇಮಕಾತಿ ಆದೇಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.